ಭಾರತದಲ್ಲಿ iQOO 15R ಬಿಡುಗಡೆ! 50MP ಕ್ಯಾಮೆರಾ, 7600mAh ಬ್ಯಾಟರಿ ಸಪೋರ್ಟ್‌ ಇದೆ

HIGHLIGHTS

iQOO 15R ಫೋನ್‌ ಇದೇ ಮಾರ್ಚ್ 3 ರಂದು ಖರೀದಿಗೆ ಲಭ್ಯ ಆಗಲಿದೆ

ಈ ಮೊಬೈಲ್‌ 7600mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಒಳಗೊಂಡಿದೆ

iQOO 15R ಮೊಬೈಲ್‌ ಮುಖ್ಯ ಕ್ಯಾಮೆರಾ 200MP ಸೆನ್ಸಾರ್‌ ಆಗಿದೆ

ಐಕ್ಯೂ ಮೊಬೈಲ್‌ ಕಂಪನಿಯ ಬಹುನಿರೀಕ್ಷಿತ iQOO 15R ಮೊಬೈಲ್‌ ಇಂದು (ಫೆಬ್ರವರಿ 24 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಲಾಗಿದೆ. ಮೀಡ್‌ರೇಂಜ್‌ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಮೊಬೈಲ್‌ ಕ್ವಾಲ್ಕಾಮ್ Snapdragon 8 Gen 5 ಪ್ರೊಸೆಸರ್‌ ಪವರ್‌ ಪಡೆದಿದೆ. ಅಲ್ಲದೇ 144Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 50MP ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ iQOO 15R ಮೊಬೈಲ್‌ ಬೆಲೆ, ಸೇಲ್‌ ದಿನಾಂಕ ಹಾಗೂ ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Amazon ಸಂಸ್ಥೆಯ ಏಷ್ಯಾದಲ್ಲಿ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

iQOO 15R ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಹೊಸದಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ iQOO 15R ಮೊಬೈಲ್‌ ಮೂರು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. 8 GB + 256 GB ವೇರಿಯಂಟ್‌ ಬೆಲೆ 44,999 ರೂಗಳು ಆಗಿದೆ. ಅದೇ ರೀತಿ 12 GB + 256 GB ವೇರಿಯಂಟ್‌ ದರವು 47,999 ರೂಗಳು ಆಗಿದ್ದು ಹಾಗೆಯೇ 12 GB + 512 GB ವೇರಿಯಂಟ್‌ 52,999 ರೂಗಳ ಬೆಲೆಯಲ್ಲಿ ಮಾರುಕಟ್ಟೆ ಪ್ರವೇಶಿಸಿವೆ. ಇನ್ನು ಈ ಫೋನ್‌ ಡಾರ್ಕ್ ನೈಟ್ ಮತ್ತು ಟ್ರಯಂಫ್ ಸಿಲ್ವರ್ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಮತ್ತು ಐಕ್ಯೂ ಇ-ಸ್ಟೋರ್, ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್ ಮತ್ತು ರಿಲಯನ್ಸ್ ಸ್ಟೋರ್‌ಗಳ ಮೂಲಕ ಪ್ರಿ-ಬುಕಿಂಗ್ ಮಾಡಬಹುದಾಗಿದೆ. ಪ್ರಿ-ಬುಕಿಂಗ್ ಮಾಡಿದ ಗ್ರಾಹಕರಿಗೆ ಮಾರ್ಚ್ 2 ರಂದು ಫೋನ್‌ ಕೈಸೇರಲಿದೆ. ಇನ್ನು ಈ ಫೋನಿನ ಸಾಮಾನ್ಯ ಸೇಲ್‌ ಮಾರ್ಚ್ 3 ರಂದು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ.

iQOO 15R ಮೊಬೈಲ್‌ ಫೀಚರ್ಸ್‌ ಮಾಹಿತಿ

ಹೊಸ iQOO 15R ಸ್ಮಾರ್ಟ್‌ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಫೋನ್‌ ಸ್ಕ್ರೀನ್‌ 5,000 ನಿಟ್ಸ್ ಬ್ರೈಟ್ನೆಸ್‌ ಸಪೋರ್ಟ್‌ ಜೊತೆಗೆ 2750 x 1260 ಪಿಕ್ಸಲ್‌ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ ಈ ನೂತನ ಮೊಬೈಲ್‌ ಕ್ವಾಲ್ಕಾಮ್ Snapdragon 8 Gen 5 ಚಿಪ್‌ಸೆಟ್‌ ಪ್ರೊಸೆಸರ್‌ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ Origin OS 6.0 ಸಾಫ್ಟ್‌ವೇರ್ ಒಳಗೊಂಡಿದೆ. ಹಾಗೆಯೇ 256 GB ಹಾಗೂ 512 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ iQOO 15R ಮೊಬೈಲ್‌ 45W ವೈರ್ಡ್ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 7600mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒದಗಿಸಲಾಗಿದೆ. ಇದರೊಂದಿಗೆ ಈ ಫೋನ್‌ IP68 + IP69 ಧೂಳು ಮತ್ತು ನೀರಿನ ನಿರೋಧಕ ರೇಟಿಂಗ್ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :