ಐಕ್ಯೂ ಇತ್ತೀಚಿಗೆ ಬಿಡುಗಡೆ ಮಾಡಿರುವ iQOO Neo 10 ಫೋನಿನ ಹೊಸ ಬಣ್ಣಗಳ ವೇರಿಯಂಟ್ ಮೊಬೈಲ್ ಆಕರ್ಷಕ ಎನಿಸಿದೆ. ಈ ಸ್ಮಾರ್ಟ್‌ಫೋನ್ ಇಂದು (ಮೇ 5 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್ ಶುರು ಮಾಡಿದೆ. ಇನ್ನು ಈ ಮೊಬೈಲ್ Snapdragon 8 Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿರುವ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಹಾಗೆಯೇ ಸ್ಮಾರ್ಟ್‌ಫೋನ್ ಹೊಸದಾಗಿ Alpine White ಹಾಗೂ Asphalt Black ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಐಕ್ಯೂ ನಿಯೋ 10 ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : JioHotstar ಚಂದಾದಾರಿಕೆ ಲಭ್ಯವಿರುವ ಅಗ್ಗದ ಬೆಲೆಯ Vi ಡೇಟಾ ಪ್ಲಾನ್‌ಗಳ ಮಾಹಿತಿ
ಇತ್ತೀಚಿಗೆ Alpine White ಹಾಗೂ Asphalt Black ಕಲರ್ ವೇರಿಯಂಟ್‌ನಲ್ಲಿ ಬಿಡುಗಡೆ ಆದ ಐಕ್ಯೂ ನಿಯೋ 10 ಮೊಬೈಲ್ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಮೊಬೈಲ್ ಇಂದು (ಮೇ 5 ರಂದು) ಮಧ್ಯಾಹ್ನ 12 ರಂದು ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಿದೆ. ಐಕ್ಯೂ ನಿಯೋ 10 ಮೊಬೈಲ್‌ನ ಇನ್ನು ಈ ಮೊಬೈಲ್‌ನ ಹೊಸ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 37,999 ರೂ.ಗಳು ಆಗಿದೆ. ಹಾಗೆಯೇ 16GB + 256GB ವೇರಿಯಂಟ್ ದರವು 42,999 ರೂ.ಗಳು ಆಗಿದೆ. ಆದರೆ ಆರಂಭಿಕ ಕೊಡುಗೆಯಾಗಿ 8GB ಮತ್ತು 16GB RAM ವೇರಿಯಂಟ್‌ಗಳು ಕ್ರಮವಾಗಿ 34,999 ರೂ.ಗಳು ಮತ್ತು Rs. 40,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ.
ಐಕ್ಯೂ ನಿಯೋ 10 ಮೊಬೈಲ್ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 144Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದೆ. ಅಲ್ಲದೇ ಈ ಡಿಸ್‌ಪ್ಲೇಯು 1,260×2,800 ಪಿಕ್ಸಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ Snapdragon 8 Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 16GB + 256GB ವೇರಿಯಂಟ್ ಆಯ್ಕೆ ಪಡೆದಿದೆ.
ಹಾಗೆಯೇ ಐಕ್ಯೂ ನಿಯೋ 10 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 MP ಸೆನ್ಸಾರ್‌ನ ಕ್ಯಾಮೆರಾ ಪಡೆದಿದೆ. ಈ ಮೊಬೈಲ್ 7,000mAh ಸಾಮರ್ಥ್ಯದ ಬ್ಯಾಟರಿ ಪವರ್ ಹೊಂದಿದೆ. ಇದಕ್ಕೆ ಪೂರಕವಾಗಿ ಈ ಮೊಬೈಲ್ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಒಳಗೊಂಡಿದೆ.