ದೇಶೀಯ ಮೊಬೈಲ್ ಮಾರುಕಟ್ಟೆಯಲ್ಲಿ ಐಕ್ಯೂ ಕಂಪನಿಯು ಕೆಲವು ಫೋನ್‌ಗಳು ಸದ್ದು ಮಾಡಿವೆ. ಆ ಪೈಕಿ ಸಂಸ್ಥೆಯ ಐಕ್ಯೂ ನಿಯೋ 10 ಫೋನ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಸದ್ಯ iQOO Neo 10 ಮೊಬೈಲ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 8s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಐಕ್ಯೂ ನಿಯೋ 10 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಇರುವ Airtel ಟೆಲಿಕಾಂನ ಬೆಸ್ಟ್ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ!
ಐಕ್ಯೂ ನಿಯೋ 10 ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ವೇರಿಯಂಟ್ ಬೆಲೆ 45,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 37,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಗ್ರಾಹಕರು ಈ ಮೊಬೈಲ್ ಅನ್ನು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಐಕ್ಯೂ ನಿಯೋ 10 ಫೋನ್ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 144Hz ರಿಫ್ರೆಶ್ ರೇಟ್ ಸಪೋರ್ಟ್ ಹೊಂದಿದೆ. ಅಲ್ಲದೇ ಈ ಡಿಸ್‌ಪ್ಲೇಯು 1,260×2,800 ಪಿಕ್ಸಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 8s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 16GB + 256GB ವೇರಿಯಂಟ್ ಆಯ್ಕೆ ಪಡೆದಿದೆ.
ಹಾಗೆಯೇ ಐಕ್ಯೂ ನಿಯೋ 10 ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 MP ಸೆನ್ಸಾರ್‌ನ ಕ್ಯಾಮೆರಾ ಪಡೆದಿದೆ. ಈ ಮೊಬೈಲ್ 7,000mAh ಸಾಮರ್ಥ್ಯದ ಬ್ಯಾಟರಿ ಪವರ್ ಹೊಂದಿದೆ. ಇದಕ್ಕೆ ಪೂರಕವಾಗಿ ಈ ಮೊಬೈಲ್ 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಒಳಗೊಂಡಿದೆ.