120W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಇರುವ iQOO Neo 10 ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ಅಮೆಜಾನ್‌ನಲ್ಲಿ ಐಕ್ಯೂ ನಿಯೋ 10 ಫೋನಿಗೆ ಆಕರ್ಷಕ ಕೊಡುಗೆ

ಐಕ್ಯೂ ನಿಯೋ 10 ಫೋನ್‌ 50MP ಸೆನ್ಸಾರ್‌ ಕ್ಯಾಮೆರಾ ರಚನೆ ಪಡೆದಿದೆ

ಐಕ್ಯೂ ನಿಯೋ 10 ಮೊಬೈಲ್ 144Hz ರಿಫ್ರೆಶ್ ರೇಟ್‌ ಸಪೋರ್ಟ್ ಹೊಂದಿದೆ

120W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಇರುವ iQOO Neo 10 ಬೆಲೆಯಲ್ಲಿ ಭರ್ಜರಿ ಇಳಿಕೆ!

ಐಕ್ಯೂ ಮೊಬೈಲ್‌ ಕಂಪನಿಯ ಮೀಡ್‌ರೇಂಜ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ iQOO Neo 10 ಮೊಬೈಲ್ ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಐಕ್ಯೂ ನಿಯೋ 10 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅಮೆಜಾನ್‌ Prime Day 2026: ಪ್ರಮುಖ ಬ್ರಾಂಡ್‌ಗಳ ಸ್ಮಾರ್ಟ್‌ಟಿವಿ ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌

iQOO Neo 10 ಬೆಲೆಯಲ್ಲಿ ಬಿಗ್‌ ಆಫರ್‌

ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಐಕ್ಯೂ ಮೊಬೈಲ್‌ ಕಂಪನಿಯ ಐಕ್ಯೂ ನಿಯೋ 10 ಮೊಬೈಲ್‌ ಅಮೆಜಾನ್‌ನಲ್ಲಿ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 45,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 41,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

iQOO Neo 10
iQOO Neo 10 gets massive Price drop

ಐಕ್ಯೂ ನಿಯೋ 10 ಮೊಬೈಲ್‌ನ ಫೀಚರ್ಸ್‌

ಐಕ್ಯೂ ನಿಯೋ 10 ಫೋನ್‌ 6.78 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 144Hz ರಿಫ್ರೆಶ್ ರೇಟ್‌ ಸಪೋರ್ಟ್ ಹೊಂದಿದೆ. ಅಲ್ಲದೇ ಈ ಡಿಸ್‌ಪ್ಲೇಯು 1,260×2,800 ಪಿಕ್ಸಲ್‌ ರೆಸಲ್ಯೂಶನ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಸ್ನಾಪ್‌ಡ್ರಾಗನ್ 8s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 16GB + 256GB ವೇರಿಯಂಟ್‌ ಆಯ್ಕೆ ಪಡೆದಿದೆ.

ಹಾಗೆಯೇ ಐಕ್ಯೂ ನಿಯೋ 10 ಫೋನ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 MP ಸೆನ್ಸಾರ್‌ನ ಕ್ಯಾಮೆರಾ ಪಡೆದಿದೆ. ಈ ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪವರ್‌ ಹೊಂದಿದೆ. ಇದಕ್ಕೆ ಪೂರಕವಾಗಿ ಈ ಮೊಬೈಲ್‌ 120W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಸಹ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile