iQOO Z10 5G Price Drop On Amazon
ಪ್ರಸ್ತುತ ನಿಮಗೊಂದು ಅಥವಾ ನಿಮಗೆ ತಿಳಿದವರಿಗೊಂದು ಹೊಸ ಜಬರ್ದಸ್ತ್ 5G ಸ್ಮಾರ್ಟ್ಫೋನ್ ಗಿಫ್ಟ್ ನೀಡಲು ಅಥವಾ ನಿಮಗಾಗಿ ಬಳಸಲು ಯೋಚಿಸುತ್ತಿದ್ದರೆ ಐಕ್ಯೂ ಕಂಪನಿಯ ಈ ಪವರ್ಫುಲ್ ಸ್ಮಾರ್ಟ್ಫೋನ್ ಬಗ್ಗೆ ಪರಿಶೀಲಿಸಬಹುದು. ಯಾಕೆಂದರೆ ಬರೋಬ್ಬರಿ 7300mAh ಅಲ್ಟ್ರಾ ಸಾಮರ್ಥ್ಯದ ಬ್ಯಾಟರಿಯ iQOO Z10 5G ಸ್ಮಾರ್ಟ್‌ಫೋನ್ ಅಮೆಜಾನ್ನಲ್ಲಿ ಭಾರಿ ಡಿಸ್ಕೌಂಟ್‌ಗಳೊಂದಿಗೆ ಮಾರಾಟವಾಗುತ್ತಿದೆ. ಈ ಸ್ಮಾರ್ಟ್ಫೋನ್ ಬ್ಯಾಟರಿ ಖಾಲಿಯಾದರೆ ಬೇಗ ರಿಚಾರ್ಜ್ ಮಾಡಲು 90W ಫ್ಲಾಶ್ ಚಾರ್ಜ್ ಟೆಕ್ನಾಲಜಿಯೊಂದಿಗೆ ಪ್ಯಾಕ್ ಮಾಡಲಾಗಿದೆ. iQOO Z10 5G ಸ್ಮಾರ್ಟ್‌ಫೋನ್ ಅನೇಕ ಇಂಟ್ಟ್ರೆಸ್ಟಿಂಗ್ ಫೀಚರ್ಗಳನ್ನು ಹೊಂದಿದ್ದು ಬ್ಯಾಂಕ್ ಮತ್ತು ವಿನಿಮಯ ಆಫರ್ ಅಡಿಯಲ್ಲಿ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯವಿದೆ.
ಈ iQOO Z10 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹21,998 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹23,998 ರೂಗಳಿಗೆ ಮತ್ತು ಕೊನೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹25,998 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡ್ ಬಳಸಿಕೊಂಡು ಸುಮಾರು 2000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ iQOO Z10 5G ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು 19,998 ರೂಗಳ ವರೆಗೆ ಕಡಿಮೆಯಾಗುವ ಸಾಧ್ಯತೆಗಳಿವೆ.
ಅಲ್ಲದೆ iQOO Z10 5G ಸ್ಮಾರ್ಟ್ಫೋನ್ ಮೇಲೆ ಅಮೆಜಾನ್ ನಿಮಗೆ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ iQOO Z10 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 20,500 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು. ಆದರೆ ಈ ಡೀಲ್ ಬೆಲೆ ನಿಮ್ಮ ಹಳೆ ಸ್ಮಾರ್ಟ್ ಫೋನಿನ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಬೇಕಿದೆ.
ಇದನ್ನೂ ಓದಿ: Airtel 90 Days Plan: ಬರೋಬ್ಬರಿ 3 ತಿಂಗಳ ವ್ಯಾಲಿಡಿಟಿಯೊಂದಿಗೆ ಬರುವ ಏರ್ಟೆಲ್ ರಿಚಾರ್ಜ್ ಪ್ಲಾನ್!
iQOO Z10 ಸ್ಮಾರ್ಟ್ಫೋನ್ 6.77 ಇಂಚಿನ ಪೂರ್ಣ HD+ AMOLED ಡಿಸ್ಪ್ಲೇಯನ್ನು 120Hz ರಿಫ್ರೆಶ್ ದರದೊಂದಿಗೆ ಹೊಂದಿದೆ ಮತ್ತು ಇದು 5000 nits ಗರಿಷ್ಠ ಹೊಳಪನ್ನು ನೀಡುತ್ತದೆ. ಇದಲ್ಲದೆ ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 3 ಚಿಪ್‌ನಿಂದ ಚಾಲಿತವಾಗಿದ್ದು 12GB ವರೆಗಿನ LPDDR4X RAM ಮತ್ತು ಗರಿಷ್ಠ 256GB UFS 2.2 ಸ್ಟೋರೇಜ್ ಅನ್ನು ಹೊಂದಿದೆ.
ಸ್ಮಾರ್ಟ್ಫೋನ್ ಕ್ಯಾಮೆರಾದಲ್ಲಿ OIS ನೊಂದಿಗೆ 50MP ಪ್ರೈಮರಿ ಸೆನ್ಸರ್ ಮತ್ತು f/2.4 ಅಪರ್ಚರ್ 2MP ದ್ವಿತೀಯ ಶೂಟರ್ ಅನ್ನು ಒಳಗೊಂಡಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಪಡೆಯುತ್ತದೆ. ಮುಂಭಾಗದಲ್ಲಿ ಇದು 8MP ಸೆಲ್ಫಿ ಸೆನ್ಸರ್ ಅನ್ನು ಹೊಂದಿದೆ. ಆದಾಗ್ಯೂ iQOO Z10 ದೊಡ್ಡ ಹೈಲೈಟ್ ಎಂದರೆ ಇದು 90W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ದೊಡ್ಡ 7300mAh ಬ್ಯಾಟರಿಯೊಂದಿಗೆ ಬರುತ್ತದೆ.