iQOO Z10 Officially Launched in India
iQOO Z10 Officially Launched in India: ಭಾರತದಲ್ಲಿ ಇಂದು ಚೀನಾದ ಸ್ಮಾರ್ಟ್ಫೋನ್ ಬ್ರಾಂಡ್ ಐಕ್ಯೂ (iQOO) ತನ್ನ ಲೇಟೆಸ್ಟ್ 5G ಸ್ಮಾರ್ಟ್ಫೋನ್ ಸರಣಿಯನ್ನು ಪರಿಚಯಿಸಿದೆ. ಕಂಪನಿ ಇದರಲ್ಲಿ iQOO Z10 ಮತ್ತು iQOO Z10x ಎಂಬ ಎರಡು ಲೇಟೆಸ್ಟ್ ಸ್ಮಾರ್ಟ್ಫೋನ್ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಇಲ್ಲಿ ಕೇವಲ iQOO Z10 ಸ್ಮಾರ್ಟ್ಫೋನ್ ಬಗ್ಗೆ ಮಾತ್ರ ವಿವರಿಸಲಾಗಿದೆ. ಇದರ ವಿಶೇಷವೆಂದರೆ ಆರಂಭಿಕ 8GB RAM ಮತ್ತು ಅತಿದೊಡ್ಡ 7300mAh ಬ್ಯಾಟರಿಯೊಂದಿಗೆ ಜಬರ್ದಸ್ತ್ ಗೇಮಿಂಗ್ ಫೀಚರ್ಗಳೊಂದಿಗೆ ಬರುತ್ತದೆ. ಹಾಗಾದ್ರೆ ಆಫರ್ ಬೆಲೆಯೊಂದಿಗೆ ಟಾಪ್ ಫೀಚರ್ಗಳೇನು ಎಲ್ಲವನ್ನು ಈ ಕೆಳಗೆ ತಿಳಿಯಬಹುದು.
Also Read: ₹10 ಸಾವಿರಕ್ಕಿಂತ ಕಡಿಮೆ ಬೆಲೆಗೆ Motorola ಹೊಸ 5G Smartphone! 50MP ಮತ್ತು 5000mAh ಬ್ಯಾಟರಿ ಲಭ್ಯ!
iQOO Z10 ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹21,999 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹23,999 ರೂಗಳಿಗೆ ಮತ್ತು ಇದರ ಕೊನೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹25,999 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಆದರೆ ಆಸಕ್ತ ಬಳಕೆದಾರರು ಹೆಚ್ಚುವರಿ 2000 ರೂಗಳ ಡಿಸ್ಕೌಂಟ್ ಸಹ ಪಡೆಯುವ ಮೂಲಕ ಈ ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಕೇವಲ 19,999 ರೂಗಳಿಗೆ ಖರೀದಿಸಬಹುದು. iQOO Z10 ಸ್ಮಾರ್ಟ್ಫೋನ್ ಭಾರತದಲ್ಲಿ ಬಿಡುಗಡೆಯಾಗಿದ್ದು ಇದರ ಮೊದಲ ಮಾರಾಟವನ್ನು 16ನೇ ಏಪ್ರಿಲ್ 2025 ಮಧ್ಯಾಹ್ನ 12:00 ಗಂಟೆಯಿಂದ ಅಮೆಜಾನ್ ಇಂಡಿಯಾ ಮತ್ತು ಐಕ್ಯೂ ವೆಬ್‌ಸೈಟ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಲಭ್ಯವಾಗಲಿದೆ.
iQOO Z10 ಸ್ಮಾರ್ಟ್ಫೋನ್ 90Hz ರಿಫ್ರೆಶ್ ರೇಟ್ನೊಂದಿಗೆ 6.77 ಇಂಚಿನ AMOLED (2392×1080 ಪಿಕ್ಸೆಲ್‌ಗಳು) FHD ಅನ್ನು ಹೊಂದಿದೆ. ಫೋಟೋಗಳು ಮತ್ತು ವೀಡಿಯೊಗಳಿಗಾಗಿ iQOO Z10 ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ 7300mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಇದು f/1.8 ಅಪಾರ್ಚರ್‌ನೊಂದಿಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು OIS ಜೊತೆಗೆ ಬರುತ್ತದೆ. ಮತ್ತೊಂದು 2MP ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಇದರ ಕ್ರಮವಾಗಿ ಫೋನ್ ಮುಂಭಾಗದಲ್ಲಿ ಸೇಲ್ಫಿ ಮತ್ತು ವಿಡಿಯೋ ಕರೆಗಾಗಿ 32MP ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಸ್ಮಾರ್ಟ್ಫೋನ್ ವಾಟರ್ ಮತ್ತು ಡಸ್ಟ್ ಪ್ರೊಟೆಕ್ಷನ್‌ಗಾಗಿ IP65 ರೇಟಿಂಗ್ ಅನ್ನು ಸಹ ಈ ಫೋನ್ ಹೊಂದಿದೆ.
iQOO Z10 ಸ್ಮಾರ್ಟ್ಫೋನ್ Snapdragon 7s Gen 3 ಪ್ರೊಸೆಸರ್‌ನೊಂದಿಗೆ ಬರುತ್ತದೆ. iQOO Z10 ಸ್ಮಾರ್ಟ್ಫೋನ್ ಆರಂಭಿಕ 8GB RAM ಆನ್‌ಬೋರ್ಡ್ ಮೆಮೊರಿಯನ್ನು ವಿಸ್ತರಿಸುವ ಆಯ್ಕೆಯನ್ನು ಹೊಂದಿದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port ಮತ್ತು AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ.