iQOO Z10R launched stunning design and features
iQOO Z10R launched in India: ಭಾರತದಲ್ಲಿ ಇಂದು ಐಕ್ಯೂ ತನ್ನ ಜಬರ್ದಸ್ತ್ ಕ್ಯಾಮೆರಾ ಸ್ಮಾರ್ಟ್ಫೋನ್ iQOO Z10R ಬಜೆಟ್ ಶ್ರೇಣಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸ್ಮಾರ್ಟ್ಫೋನ್ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ ಇದಕ್ಕೆ ಕಾರಣ 32MP 4K Selfie ಕ್ಯಾಮೆರಾ ಮತ್ತು Sony IMX882 ಪ್ರೈಮರಿ ಕ್ಯಾಮೆರಾದೊಂದಿಗೆ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ₹17,499 ರೂಗಳಿಗೆ ಲಭ್ಯವಿದೆ. ಈ iQOO Z10R ಬಜೆಟ್ ಬೆಲೆಗೆ ಇದರಂತೆ ಕ್ಯಾಮೆರಾ ಮತ್ತು ಫೀಚರ್ಗಳನ್ನು ಬೇರೆ ಯಾವುದೇ ಸ್ಮಾರ್ಟ್ಫೋನ್ಗಳಲ್ಲಿ ಲಭ್ಯವಿಲ್ಲ ಎನ್ನೋದು ಗಮನಿಸಬೇಕಿದೆ. ಹಾಗಾದ್ರೆ ಇದರ ಆಫರ್ ಬೆಲೆ ಮತ್ತು ಫೀಚರ್ಗಳೇನು ತಿಳಿಯಿರಿ.
ಈ iQOO Z10R ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹19,499 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹21,999 ರೂಗಳಿಗೆ ಮತ್ತು ಕೊನೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹23,499 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡ್ ಬಳಸಿಕೊಂಡು ಸುಮಾರು 2000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ iQOO Z10R ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು 17,499 ರೂಗಳ ವರೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಪ್ರಯತ್ನಿಸಬಹುದು. ಈ iQOO Z10R ಸ್ಮಾರ್ಟ್ಫೋನ್ 29 ಜೂಲೈ 2025 ರಂದು ಅಮೆಜಾನ್ ಮತ್ತು ಐಕ್ಯೂ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
ಇದನ್ನೂ ಓದಿ: 50 ಇಂಚಿನ ಜಬರ್ದಸ್ತ್ QLED 4K Smart TV ಫ್ಲಿಪ್‌ಕಾರ್ಟ್‌ನಲ್ಲಿ ಬರಿ ₹25 ಸಾವಿರದೊಳಗೆ ಲಭ್ಯ!
iQOO Z10R ಸ್ಮಾರ್ಟ್ಫೋನ್ 6.77 ಇಂಚಿನ AMOLED (2392×1080 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ ಹೊಂದಿದೆ. iQOO Z10R ಫೋನ್ ಕಾಮೆರದಲ್ಲಿ 50MP ಸೋನಿ IMX882 ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 32MP 4K Selfie ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
iQOO Z10R ಫೋನ್ MediaTek Dimensity 7400 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 15.0.2 ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, eSIM Support, AGPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ OPPO Reno 14 5G ಸ್ಮಾರ್ಟ್ಫೋನ್ 5700mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಕಂಪನಿ ಇದರಲ್ಲಿ ೩ ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು $ ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.