ಸ್ಲಿಮ್ ಡಿಸೈನ್ ಹೊಂದಿರುವ iQOO Z10R ಮೊಬೈಲ್ ಖರೀದಿಗೆ ಇದು ಬೆಸ್ಟ್ ಟೈಮ್!
ಅಮೆಜಾನ್‌ನಲ್ಲಿ ಐಕ್ಯೂ Z10R ಫೋನ್ ಬೆಲೆಯಲ್ಲಿ ಭಾರೀ ಇಳಿಕೆ
ಐಕ್ಯೂ ಸಂಸ್ಥೆಯ ಈ ಮೊಬೈಲ್ ಎರಡು ಆಕರ್ಷಕ ಕಲರ್ ಆಯ್ಕೆಗಳನ್ನು ಹೊಂದಿದೆ
ಐಕ್ಯೂ Z10R ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ
ಬಜೆಟ್ ದರದಲ್ಲಿ ಹೊಸದೊಂದು ಸ್ಟೈಲಿಶ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಸದ್ಯ ಅಮೆಜಾನ್ ವೆಬ್‌ಸೈಟ್ ಅತ್ಯುತ್ತಮ ತಾಣ. ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಇದೀಗ iQOO Z10R ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಐಕ್ಯೂ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,700mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಐಕ್ಯೂ Z10R ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Wedding Invitation Prompts for ChatGPT: ವಿವಾಹ ಆಮಂತ್ರಣ ರಚಿಸಲು ಇಲ್ಲಿವೆ ನೋಡಿ 10+ ಪ್ರಾಂಪ್ಟ್
iQOO Z10R ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ
ಐಕ್ಯೂ ಸಂಸ್ಥೆಯ ಐಕ್ಯೂ Z10R ಫೋನ್ ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 6GB RAM + 128GB ವೇರಿಯಂಟ್ ಬೆಲೆ 23,499 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 22,998 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಅಕ್ವಾಮರೀನಾ ಹಾಗೂ ಮೂನ್‌ಸ್ಟೋನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಐಕ್ಯೂ Z10R ಫೀಚರ್ಸ್ ಮಾಹಿತಿ
ಐಕ್ಯೂ Z10R ಫೋನ್ ಡಿಸ್‌ಪ್ಲೇಯು 6.77 ಇಂಚಿನ ಕ್ವಾಡ್ ಕರ್ವ್ಡ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1800 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಒಪ್ಪೋದ ಈ ಮೊಬೈಲ್ 6GB RAM + 128GB, 8GB + 256GB ಹಾಗೂ 12GB + 256GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 15 ಅನ್ನು ಆಧರಿಸಿದ ಫನ್‌ಟಚ್ OS 15 ನಲ್ಲಿ ಕೆಲಸ ಮಾಡುತ್ತದೆ.
ಹಾಗೆಯೇ ಐಕ್ಯೂ Z10R ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೋನಿ IMX882 ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP 4K ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 5,700mAh ಬ್ಯಾಟರಿ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile