ನಾಳೆ iQOO Z11 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ; ಬಿಗ್ ಬ್ಯಾಟರಿ ಸೌಲಭ್ಯ

HIGHLIGHTS

ನಾಳೆ ಐಕ್ಯೂ Z11 ಸ್ಮಾರ್ಟ್‌ಫೋನ್‌ ಸೇಲ್‌ ಪ್ರಾರಂಭ

ಐಕ್ಯೂ Z11 ಸ್ಮಾರ್ಟ್‌ಫೋನ್ 7,050mAh ಬ್ಯಾಟರಿ ಪಡೆದಿದೆ

ಐಕ್ಯೂ Z11 ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಲಭ್ಯ

ಐಕ್ಯೂ ಸಂಸ್ಥೆಯ ಹೊಸ iQOO Z11 ಫೋನ್‌ ಮೀಡ್‌ರೇಂಜ್‌ ಬೆಲೆ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಆಗಷ್ಟ್‌ 25 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಸೇಲ್‌ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಜೊತೆಗೆ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್‌ ಆಕರ್ಷಕ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಐಕ್ಯೂ Z11 ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Realme P4 Lite 5G ಮೊಬೈಲ್‌ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!

ನಾಳೆ iQOO Z11 ಮೊಬೈಲ್‌ ಸೇಲ್‌

ಐಕ್ಯೂ ಕಂಪನಿಯ ಐಕ್ಯೂ Z11 ಮೊಬೈಲ್‌ ನಾಳೆ (ಆಗಷ್ಟ್‌ 25 ರಿಂದ) ಮಧ್ಯಾಹ್ನ 12 ಗಂಟೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ 34,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 39,999 ರೂ.ಗಳ ಬೆಲೆಯನ್ನು ಹೊಂದಿದೆ. ಅಲ್ಲದೇ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 44,999 ರೂ.ಗಳ ಬೆಲೆಯನ್ನು ಪಡೆದಿದೆ. ಇನ್ನು 12GB + 256GB ಸ್ಟೋರೇಜ್‌ ವೇರಿಯಂಟ್‌ 49,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್‌ ಅಮೆಜಾನ್, ಐಕ್ಯೂ ವೆಬ್‌ಸೈಟ್, ರಿಲಯನ್ಸ್ ಡಿಜಿಟಲ್ ಮತ್ತು ವಿವೋ ರಿಟೇಲ್‌ ಸ್ಟೋರ್‌ಗಳ ಮೂಲಕ ಮಾರಾಟಕ್ಕೆ ಬರಲಿದೆ.

iQOO Z11

ಐಕ್ಯೂ Z11 ಮೊಬೈಲ್‌ ಫೀಚರ್ಸ್‌

ಐಕ್ಯೂ Z11 ಮೊಬೈಲ್‌ 6.8 ಇಂಚಿನ 3D ಕರ್ವ್ಡ AMOLED 1.5K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 2,000 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ನಾಲ್ಕು ಭಿನ್ನ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 + IP69 ರೇಟಿಂಗ್‌ ಹೊಂದಿದೆ.

ಹಾಗೆಯೇ ಐಕ್ಯೂ Z11 ಮೊಬೈಲ್‌ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,050mAh ಬ್ಯಾಟರಿ ಸಪೋರ್ಟ್‌ ಜೊತೆಗೆ 44W ಫ್ಲ್ಯಾಶ್‌ಚಾರ್ಜ್‌ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.4, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :