iQOO Z11
ಜನಪ್ರಿಯ ಐಕ್ಯೂ ಕಂಪನಿಯ ಬಹುನಿರೀಕ್ಷಿತ iQOO Z11 ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 20 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಮೊಬೈಲ್ ಬಿಡುಗಡೆ ಕುರಿತು ಈಗಾಗಲೇ ಅಮೆಜಾನ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ನೂತನವಾಗಿ ಲಗ್ಗೆ ಇಡಲಿರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನು ಈ ಮೊಬೈಲ್ 7,050mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಆಗಿದೆ. ಹಾಗಾದರೆ ಐಕ್ಯೂ Z11 ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Google Pixel 11 Pro Fold vs Samsung Galaxy Z Fold 8 Ultra: ಖರೀದಿಗೆ ಯಾವುದು ಬೆಸ್ಟ್?
ಐಕ್ಯೂ ಕಂಪನಿಯು ತನ್ನ ಹೊಸ ಐಕ್ಯೂ Z11 ಮೊಬೈಲ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಫೋನ್ ಇಂದು (ಆಗಷ್ಟ್ 20 ರಂದು) ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿದೆ. ಈಗಾಗಲೇ ಅಮೆಜಾನ್‌ನಲ್ಲಿ ಈ ಫೋನ್‌ಗಳಿಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ. ಇನ್ನು ಈ ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿರಬಹುದು ಎನ್ನಲಾಗಿದೆ. ಹಾಗೆಯೇ ಇದು ಎರಡು ಆಕರ್ಷಕ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ. ಇದರ ಬೆಲೆ ಸುಮಾರು 40,000 ರೂ.ಗಳ ಒಳಗೆ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂಬರುವ ಐಕ್ಯೂ Z11 ಫೋನ್ 6.8 ಇಂಚಿನ 3D ಕರ್ವ್ಡ AMOLED 1.5K ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಜೊತೆಗೆ 5,000 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ OriginOS 6 ಆಧಾರಿತ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.
ಐಕ್ಯೂ Z11 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು ನಿರೋಧಕ್ಕಾಗಿ ಇದು IP68 ಮತ್ತು IP69 ರೇಟಿಂಗ್ ಸೌಲಭ್ಯ ಹೊಂದಿರಲಿದೆ.