iQOO Z11 Lite With 6500mAh Battery 50MP Camera Phone Sale in India Price Offers
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನಲ್ಲಿ Amazon Great Indian Festival Sale 2026 ಸೇಲ್ ಇದೀಗ ಲೈವ್ ಆಗಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಐಕ್ಯೂ ಕಂಪನಿಯ iQOO Z11 Lite ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಮಿಡ್‌ನೈಟ್ ಬ್ಲೂ ಮತ್ತು ಸೋಲಾರ್ ಫ್ಲೇಮ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಐಕ್ಯೂ Z11 ಲೈಟ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ಒಳಗೊಂಡ Vivo V70 ಮೊಬೈಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಈ ಅವಕಾಶ ಬಿಡಬೇಡಿ
ಡಿಸೈನ್ ಹಾಗೂ ಫೀಚರ್ಸ್ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ಐಕ್ಯೂ Z11 ಲೈಟ್ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 42,499 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 26,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಮಿಡ್‌ನೈಟ್ ಬ್ಲೂ ಮತ್ತು ಸೋಲಾರ್ ಫ್ಲೇಮ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಐಕ್ಯೂ Z11 ಲೈಟ್ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಐಕ್ಯೂ Z11 ಲೈಟ್ ಮೊಬೈಲ್ 6.74 ಇಂಚಿನ HD LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಈ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಡಿಸ್‌ಪ್ಲೇಯು 1,600 x 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ OriginOS 6 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಐಕ್ಯೂ Z11 ಲೈಟ್ ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಫೋನ್ 6,500mAh ಬ್ಯಾಟರಿ ಸಪೋರ್ಟ್ ಜೊತೆಗೆ 44W ಫ್ಲ್ಯಾಶ್‌ಚಾರ್ಜ್ ಹಾಗೂ ರಿವರ್ಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
Disclosure: This Article Contains Affiliate Links