ಭಿನ್ನ ಫೋನ್‌ಗಳ ಮೂಲಕ ಗಮನ ಸೆಳೆದಿರುವ ಐಕ್ಯೂ ಕಂಪನಿಯು ಇದೀಗ iQOO Z11 Lite ಮೊಬೈಲ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಕಂಪನಿಯ ಈ ಸ್ಮಾರ್ಟ್‌ಫೋನ್ ಇದೇ ಜುಲೈ 24 ರಂದು ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಆಗಲಿದೆ. ಆದರೆ ಬಿಡುಗಡೆಗೂ ಮುನ್ನವೇ ಈ ಫೋನಿನ ಬೆಲೆಯ ಮಾಹಿತಿ ಬಹಿರಂಗ ಆಗಿದ್ದು, ಗ್ರಾಹಕರ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ಈ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರುವುದು ಕನ್ಫರ್ಮ್ ಆಗಿದೆ. ಅಲ್ಲದೇ 50 ಮೆಗಾಪಿಕ್ಸಲ್ ಕ್ಯಾಮೆರಾ ಒಳಗೊಂಡಿರುವ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿರಲಿದೆ ಎನ್ನಲಾಗಿದೆ. ಹಾಗಾದರೆ ಮುಂಬರುವ ಐಕ್ಯೂ Z11 ಲೈಟ್ ಮೊಬೈಲ್‌ನ ಲಾಂಚ್ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಲಾಂಚ್ ಆಗಿದೆ ಬಹುನಿರೀಕ್ಷಿತ Vivo T5 Lite 5G ಮೊಬೈಲ್! 44W ಫಾಸ್ಟ್ ಚಾರ್ಜಿಂಗ್
ಮುಂಬರುವ ಹೊಸ ಐಕ್ಯೂ Z11 ಲೈಟ್ ಸ್ಮಾರ್ಟ್‌ಫೋನ್ ಗ್ರಾಹಕರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೇ ಲಾಂಚ್‌ಗೂ ಮೊದಲೇ ಈ ಫೋನಿನ ಬೆಲೆ ಬಹಿರಂಗ ಆಗಿದ್ದು, ಗ್ರಾಹಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ ಈ ನೂತನ ಸ್ಮಾರ್ಟ್‌ಫೋನ್ ಸುಮಾರು 20,000 ರೂ.ಗಳ ಒಳಗೆ ಎಂಟ್ರಿ ಕೊಡಲಿದೆ ಎಂದು ಕಂಪನಿಯು ತಿಳಿಸಿದೆ. ಇನ್ನು ಈ ಫೋನ್ ಇದೇ ಜುಲೈ 24 ರಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಲಾಂಚ್ ಬಳಿಕ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಸೋಲಾರ್ ಫೇಮ್ ಮತ್ತು ಮೀಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.
ಮುಂಬರುವ ಐಕ್ಯೂ Z11 ಲೈಟ್ ಫೋನ್ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ OriginOS 6 ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.
ಐಕ್ಯೂ Z11 ಲೈಟ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.