ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ ಎಂಟ್ರಿ ಕೊಟ್ಟಿದೆ iQOO Z11 Lite ಮೊಬೈಲ್‌! ಫೀಚರ್ಸ್‌ ನೋಡಿ

HIGHLIGHTS

ಐಕ್ಯೂ Z11 ಲೈಟ್‌ ಈ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ

ಐಕ್ಯೂ Z11 ಲೈಟ್‌ ಫೋನ್ 6,500mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ

ಐಕ್ಯೂ Z11 ಲೈಟ್‌ ಮಿಡ್‌ನೈಟ್ ಬ್ಲೂ ಮತ್ತು ಸೋಲಾರ್ ಫ್ಲೇಮ್ ಕಲರ್‌ ಆಯ್ಕೆ ಹೊಂದಿದೆ

ಭಾರತದಲ್ಲಿ ಬಜೆಟ್‌ ಬೆಲೆಯಲ್ಲಿ ಎಂಟ್ರಿ ಕೊಟ್ಟಿದೆ iQOO Z11 Lite ಮೊಬೈಲ್‌! ಫೀಚರ್ಸ್‌ ನೋಡಿ

ಜನಪ್ರಿಯ ಐಕ್ಯೂ ಕಂಪನಿಯು ತನ್ನ ಬಹುನಿರೀಕ್ಷಿತ iQOO Z11 Lite ಸ್ಮಾರ್ಟ್‌ಫೋನ್‌ ಅನ್ನು ಇಂದು (ಜುಲೈ 24) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬಜೆಟ್‌ ವಿಭಾಗದಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 50MP ಪ್ರಾಥಮಿಕ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್‌ ಮಿಡ್‌ನೈಟ್ ಬ್ಲೂ ಮತ್ತು ಸೋಲಾರ್ ಫ್ಲೇಮ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಅಲ್ಲದೇ ಇದು 6,500mAh ಬ್ಯಾಟರಿ ಸೌಲಭ್ಯ ಪಡೆದಿದೆ. ಹಾಗಾದರೇ ಐಕ್ಯೂ Z11 ಲೈಟ್‌ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : OnePlus N6x ಮೊಬೈಲ್‌ ಲಾಂಚ್‌ಗೆ ಡೇಟ್‌ ಫಿಕ್ಸ್‌! ಬಜೆಟ್‌ ಬೆಲೆಯಲ್ಲಿ ಎಂಟ್ರಿ ಕೊಡುವ ನಿರೀಕ್ಷೆ!

iQOO Z11 Lite ಬೆಲೆ ಹಾಗೂ ಲಭ್ಯತೆ

ಐಕ್ಯೂ ಕಂಪನಿಯ ಐಕ್ಯೂ Z11 ಲೈಟ್‌ ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ ಮೂರು ಸ್ಟೋರೇಜ್‌ ವೇರಿಯಂಟ್‌ಗಳನ್ನು ಒಳಗೊಂಡಿದೆ. 4GB + 128GB ವೇರಿಯಂಟ್‌ ಬೆಲೆಯು 19,499 ರೂ.ಗಳು ಆಗಿದೆ. 6GB + 128GB ವೇರಿಯಂಟ್‌ ಬೆಲೆಯು 21,499 ರೂ.ಗಳ ಪ್ರೈಸ್‌ಟ್ಯಾಗ್‌ ಪಡೆದಿದೆ. ಇದೇ ರೀತಿ 6GB + 256GB ವೇರಿಯಂಟ್‌ ಬೆಲೆಯು 24,499 ರೂ.ಗಳು ಆಗಿದೆ. ಈ ಫೋನ್ ಇದೇ ಜುಲೈ 30 ರಂದು ಮಧ್ಯಾಹ್ನ 12 ಗಂಟೆಗೆ ಐಕ್ಯೂ, ವಿವೋ, ಅಮೆಜಾನ್‌ ಹಾಗೂ ಪ್ರಮುಖ ರೀಟೇಲ್‌ ಸ್ಟೋರ್‌ಗಳ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಫೋನ್‌ ಮಿಡ್‌ನೈಟ್ ಬ್ಲೂ ಮತ್ತು ಸೋಲಾರ್ ಫ್ಲೇಮ್ ಕಲರ್‌ ಆಯ್ಕೆಗಳಲ್ಲಿ ಸಿಗಲಿದೆ.

iQOO Z11 Lite Launched in India Check Price Specifications and sale date

ಐಕ್ಯೂ Z11 ಲೈಟ್‌ ಮೊಬೈಲ್‌ ಫೀಚರ್ಸ್‌

ಐಕ್ಯೂ Z11 ಲೈಟ್‌ ಮೊಬೈಲ್‌ 6.74 ಇಂಚಿನ HD LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಈ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಪಡೆದಿದೆ. ಹಾಗೆಯೇ ಡಿಸ್‌ಪ್ಲೇಯು 1,600 x 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ OriginOS 6 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಐಕ್ಯೂ Z11 ಲೈಟ್‌ ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಫೋನ್‌ 6,500mAh ಬ್ಯಾಟರಿ ಸಪೋರ್ಟ್‌ ಜೊತೆಗೆ 44W ಫ್ಲ್ಯಾಶ್‌ಚಾರ್ಜ್ ಹಾಗೂ ರಿವರ್ಸ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile