ಜುಲೈ 24 ರಂದು iQOO Z11 Lite ಮೊಬೈಲ್‌ ಬಿಡುಗಡೆ! 44W ಫ್ಲ್ಯಾಶ್‌ ಚಾರ್ಜರ್‌ ಖಚಿತ

HIGHLIGHTS

ಜುಲೈ 24 ರಂದು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಐಕ್ಯೂ Z11 ಲೈಟ್ ಫೋನ್‌

ಐಕ್ಯೂ Z11 ಲೈಟ್ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ

ಐಕ್ಯೂ Z11 ಲೈಟ್ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ನಲ್ಲಿ ಲಗ್ಗೆ ಇಡಲಿದೆ

ಜನಪ್ರಿಯ ಐಕ್ಯೂ ಮೊಬೈಲ್ ಸಂಸ್ಥೆಯು ದೇಶೀಯ ಮಾರುಕಟ್ಟೆಗೆ ಹೊಸದಾಗಿ iQOO Z11 Lite ಸ್ಮಾರ್ಟ್‌ಫೋನ್ ಅನ್ನು ಇದೇ ಜುಲೈ 16 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಫೋನ್‌ ಲಾಂಚ್ ಕುರಿತು ಅಮೆಜಾನ್‌ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಅಂದಹಾಗೆ ಎಂಟ್ರಿ ಕೊಡಲಿರುವ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ OriginOS 6 ಆಂಡ್ರಾಯ್ಡ್‌ 16 ಓಎಸ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇನ್ನು ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಬಹುತೇಕ ಪಕ್ಕಾ ಆಗಿದೆ. ಹಾಗಾದರೆ ಐಕ್ಯೂ Z11 ಲೈಟ್ ಮೊಬೈಲ್‌ನ ಲಾಂಚ್‌ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Motorola Edge 70 Max ಮೊಬೈಲ್‌ ಲಾಂಚ್‌ಗೆ ಡೇಟ್‌ ಫಿಕ್ಸ್‌! ಪ್ರೀಮಿಯಂ ಲುಕ್‌ನಲ್ಲಿ ಬರಲಿದೆ

iQOO Z11 Lite ಬಿಡುಗಡೆಗೆ ದಿನಾಂಕ ಫಿಕ್ಸ್‌

ಐಕ್ಯೂ ಮೊಬೈಲ್‌ ಕಂಪನಿಯ ಹೊಸ ಐಕ್ಯೂ Z11 ಲೈಟ್ ಮೊಬೈಲ್‌ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಕಂಪನಿಯ ಈ ಫೋನ್‌ ಇದೇ ಜುಲೈ 24 ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಆಗುವುದು ಖಚಿತವಾಗಿದೆ. ಲಾಂಚ್‌ ಕುರಿತು ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಲೀಕ್ ಮಾಹಿತಿ ಪ್ರಕಾರ ಈ ಮೊಬೈಲ್‌ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಸೋಲಾರ್‌ ಫೇಮ್‌ ಮತ್ತು ಮೀಡ್‌ನೈಟ್‌ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.

ಐಕ್ಯೂ Z11 ಲೈಟ್ ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಮುಂಬರುವ ಈ ಫೋನ್‌ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ OriginOS 6 – ಆಂಡ್ರಾಯ್ಡ್‌ 16 ಓಎಸ್‌ ಸಪೋರ್ಟ್‌ ಪಡೆದಿರುವ ಸಾಧ್ಯತೆಗಳು ಇವೆ.

ಐಕ್ಯೂ Z11 ಲೈಟ್ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :