iQOO Z11 Lite
ದೇಶೀಯ ಮಾರುಕಟ್ಟೆಯಲ್ಲಿ ಐಕ್ಯೂ ಮೊಬೈಲ್‌ಗಳು ಬೇಡಿಕೆ ಪಡೆದಿವೆ. ಐಕ್ಯೂ ಕಂಪನಿಯು ಇದೀಗ ಹೊಸದಾಗಿ iQOO Z11 Lite ಸ್ಮಾರ್ಟ್‌ಫೋನ್ ಅನ್ನು ನಾಳೆ (ಜುಲೈ 24 ರಂದು) ಲಾಂಚ್ ಮಾಡಲು ಸಜ್ಜಾಗಿದೆ. ಈ ಫೋನ್ ಲಾಂಚ್ ಕುರಿತು ಅಮೆಜಾನ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಲಗ್ಗೆ ಇಡಲಿರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ OriginOS 6 ಆಂಡ್ರಾಯ್ಡ್ 16 ಓಎಸ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇನ್ನು ಈ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಪಕ್ಕಾ ಆಗಿದೆ. ಹಾಗಾದರೆ ಐಕ್ಯೂ Z11 ಲೈಟ್ ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung Galaxy Watch 9 ಬಿಡುಗಡೆ: ಹೊಸ ಸ್ನಾಪ್‌ಡ್ರಾಗನ್ ವೇರ್ ಎಲೈಟ್ ಚಿಪ್ ಸೌಲಭ್ಯ
ಐಕ್ಯೂ ಕಂಪನಿಯು ತನ್ನ ಹೊಸ ಐಕ್ಯೂ Z11 ಲೈಟ್ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಫೋನ್ ನಾಳೆ (ಜುಲೈ 24 ರಂದು) ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿದೆ. ಈಗಾಗಲೇ ಅಮೆಜಾನ್‌ನಲ್ಲಿ ಈ ಫೋನ್‌ಗಳಿಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ. ಇನ್ನು ಈ ಫೋನ್ 4GB + 128GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಸೋಲಾರ್ ಫೇಮ್ ಮತ್ತು ಮೀಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.
ಮುಂಬರುವ ಈ ಫೋನ್ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ OriginOS 6 – ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.
ಐಕ್ಯೂ Z11 ಲೈಟ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.