3D ಕರ್ವ್ಡ ಡಿಸ್‌ಪ್ಲೇ ಇರುವ iQOO Z11 ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

HIGHLIGHTS

ಅಮೆಜಾನ್‌ ಸೇಲ್‌ನಲ್ಲಿ ಐಕ್ಯೂ Z11 ಫೋನಿಗೆ ಉತ್ತಮ ಆಫರ್

ಐಕ್ಯೂ Z11 ಸ್ಮಾರ್ಟ್‌ಫೋನ್‌ 7,050mAh ಬ್ಯಾಟರಿ ಬೆಂಬಲ ಪಡೆದಿದೆ

ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಪ್ರೊಸೆಸರ್‌ ಹೊಂದಿದೆ

ಇ ಕಾಮರ್ಸ್‌ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ iQOO Z11 ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,050mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ Z11 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಮೊಬೈಲ್‌ನಲ್ಲಿ AI ಬಳಸಿ ಮಾಡಬಹುದಾದ 10 ಅನುಕೂಲಕರ ಕೆಲಸಗಳು ಇಲ್ಲಿವೆ

iQOO Z11 ಫೋನಿಗೆ ಸಖತ್ ಆಫರ್‌

ಬಜೆಟ್‌ ದರ ಹಾಗೂ ಉತ್ತಮ ಫೀಚರ್ಸ್‌ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ಐಕ್ಯೂ Z11 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಐಕ್ಯೂ Z11 ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

iQOO Z11 5G

ಐಕ್ಯೂ Z11 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಐಕ್ಯೂ Z11 ಮೊಬೈಲ್‌ 6.8 ಇಂಚಿನ 3D ಕರ್ವ್ಡ AMOLED 1.5K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 2,000 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ನಾಲ್ಕು ಭಿನ್ನ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 + IP69 ರೇಟಿಂಗ್‌ ಹೊಂದಿದೆ.

ಹಾಗೆಯೇ ಐಕ್ಯೂ Z11 ಸ್ಮಾರ್ಟ್‌ಫೋನ್‌ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,050mAh ಬ್ಯಾಟರಿ ಸಪೋರ್ಟ್‌ ಜೊತೆಗೆ 44W ಫ್ಲ್ಯಾಶ್‌ಚಾರ್ಜ್‌ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.4, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :