ನಾಳೆ ಮಾರುಕಟ್ಟೆಗೆ ಬರಲಿದೆ iQOO Z11 ಸ್ಮಾರ್ಟ್‌ಫೋನ್‌! ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ನಾಳೆ (ಆಗಷ್ಟ್‌ 20 ರಂದು) ಐಕ್ಯೂ Z11 ಮೊಬೈಲ್‌ ಲಾಂಚ್

ಐಕ್ಯೂ Z11 ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ

ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 7500 ಟರ್ಬೊ ಪ್ರೊಸೆಸರ್‌ ಪಡೆದಿರಲಿದೆ

ನಾಳೆ ಮಾರುಕಟ್ಟೆಗೆ ಬರಲಿದೆ iQOO Z11 ಸ್ಮಾರ್ಟ್‌ಫೋನ್‌! ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್‌ ನೋಡಿ

ಜನಪ್ರಿಯ ಐಕ್ಯೂ ಕಂಪನಿಯು ಇದೀಗ ಹೊಸದಾಗಿ iQOO Z11 ಮೊಬೈಲ್‌ ಅನ್ನು ನಾಳೆ (ಆಗಷ್ಟ್‌ 20 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಾಗಿದೆ. ಈ ಮೊಬೈಲ್‌ ಲಾಂಚ್ ಕುರಿತು ಅಮೆಜಾನ್‌ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಅಂದಹಾಗೆ ಹೊಸದಾಗಿ ಲಗ್ಗೆ ಇಡಲಿರುವ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇನ್ನು ಈ ಫೋನ್‌ 7,050mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಬಹುತೇಕ ಖಚಿತ ಆಗಿದೆ. ಹಾಗಾದರೆ ಐಕ್ಯೂ Z11 ಮೊಬೈಲ್‌ನ ಲಾಂಚ್‌ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ಭಾರತದಲ್ಲಿ Vivo Y31T 5G ಎಂಟ್ರಿ ಕೊಡಲಿದೆ! 7,200mAh ಬ್ಯಾಟರಿ ಸಾಧ್ಯತೆ

ನಾಳೆ ಮಾರುಕಟ್ಟೆಗೆ ಬರಲಿದೆ iQOO Z11 ಫೋನ್‌

ಐಕ್ಯೂ ಕಂಪನಿಯು ತನ್ನ ಹೊಸ ಐಕ್ಯೂ Z11 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಫೋನ್‌ ನಾಳೆ (ಆಗಷ್ಟ್‌ 20 ರಂದು) ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿದೆ. ಈಗಾಗಲೇ ಅಮೆಜಾನ್‌ನಲ್ಲಿ ಈ ಫೋನ್‌ಗಳಿಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ. ಇನ್ನು ಈ ಫೋನ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಒಳಗೊಂಡಿರಬಹುದು ಎನ್ನಲಾಗಿದೆ. ಹಾಗೆಯೇ ಇದು ಎರಡು ಆಕರ್ಷಕ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ. ಇದರ ಬೆಲೆ ಸುಮಾರು 40,000 ರೂ.ಗಳ ಒಳಗೆ ಇರುವ ಸಾಧ್ಯತೆ ಇದೆ ಎನ್ನಲಾಗಿದೆ.

iQOO Z11 camera software update and Battery and other specs confirmed ahead of India launch on August 20
iQOO Z11

ಐಕ್ಯೂ Z11 ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಮುಂಬರುವ ಐಕ್ಯೂ Z11 ಫೋನ್‌ 6.8 ಇಂಚಿನ 3D ಕರ್ವ್ಡ AMOLED 1.5K ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್‌ ಜೊತೆಗೆ 5,000 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ OriginOS 6 ಆಧಾರಿತ ಆಂಡ್ರಾಯ್ಡ್‌ 16 ಓಎಸ್‌ ಸಪೋರ್ಟ್‌ ಪಡೆದಿರುವ ಸಾಧ್ಯತೆಗಳು ಇವೆ.

ಐಕ್ಯೂ Z11 ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು ನಿರೋಧಕ್ಕಾಗಿ ಇದು IP68 ಮತ್ತು IP69 ರೇಟಿಂಗ್‌ ಸೌಲಭ್ಯ ಹೊಂದಿರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile