iQOO Z11
ಐಕ್ಯೂ ಮೊಬೈಲ್ ಕಂಪನಿಯ ಬಹುನಿರೀಕ್ಷಿತ iQOO Z11 ಸ್ಮಾರ್ಟ್‌ಫೋನ್ ಇಂದು (ಆಗಷ್ಟ್ 20 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 144Hz ರಿಫ್ರೆಶ್ ರೇಟ್ ಜೊತೆಗೆ 32MP ಸೆಲ್ಫಿ ಕ್ಯಾಮೆರಾ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು 50MP ಸೋನಿ IMX882 ಸೆನ್ಸರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೂರು ಆಕರ್ಷಕ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಐಕ್ಯೂ Z11 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Google Pixel 11 Pro Fold vs Samsung Galaxy Z Fold 8 Ultra: ಖರೀದಿಗೆ ಯಾವುದು ಬೆಸ್ಟ್?
ಐಕ್ಯೂ ಕಂಪನಿಯ ಐಕ್ಯೂ Z11 ಮೊಬೈಲ್ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ 34,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್ 39,999 ರೂ.ಗಳ ಬೆಲೆಯನ್ನು ಹೊಂದಿದೆ. ಅಲ್ಲದೇ 8GB RAM + 256GB ಸ್ಟೋರೇಜ್ ವೇರಿಯಂಟ್ 44,999 ರೂ.ಗಳ ಬೆಲೆಯನ್ನು ಪಡೆದಿದೆ. ಇನ್ನು 12GB + 256GB ಸ್ಟೋರೇಜ್ ವೇರಿಯಂಟ್ 49,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಇದೇ ಆಗಸ್ಟ್ 25 ರಂದು ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭವಾಗುತ್ತದೆ. ಇನ್ನು ಈ ಫೋನ್ ಅಮೆಜಾನ್, ಐಕ್ಯೂ ವೆಬ್‌ಸೈಟ್, ರಿಲಯನ್ಸ್ ಡಿಜಿಟಲ್ ಮತ್ತು ವಿವೋ ರಿಟೇಲ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ಐಕ್ಯೂ Z11 ಮೊಬೈಲ್ 6.8 ಇಂಚಿನ 3D ಕರ್ವ್ಡ AMOLED 1.5K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 2,000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ ನಾಲ್ಕು ಭಿನ್ನ ವೇರಿಯಂಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 + IP69 ರೇಟಿಂಗ್ ಹೊಂದಿದೆ.
ಹಾಗೆಯೇ ಐಕ್ಯೂ Z11 ಮೊಬೈಲ್ ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಕ್ಯಾಮೆರಾ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,050mAh ಬ್ಯಾಟರಿ ಸಪೋರ್ಟ್ ಜೊತೆಗೆ 44W ಫ್ಲ್ಯಾಶ್‌ಚಾರ್ಜ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.4, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.