iQOO Z11xa 5G with 7200mAh battery phone launched in India Price under 30000
ಜನಪ್ರಿಯ ಐಕ್ಯೂದ ಇತ್ತೀಚಿನ iQOO Z11xa 5G ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹಾಗೂ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ನಾಳೆ (ಸೆಪ್ಟೆಂಬರ್ 14 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಅಮೆಜಾನ್ ಮೂಲಕ ಮೊದಲ ಸೇಲ್ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್ ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಟೈಟಾನ್ ಬ್ಲಾಕ್ ಮತ್ತು ಪ್ರಿಸ್ಮ್ಯಾಟಿಕ್ ಗ್ರೀನ್ ಕಲರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಐಕ್ಯೂ Z11xa 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
ಬಜೆಟ್ ಬೆಲೆಯಲ್ಲಿ ಹೊಸದಾಗಿ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಐಕ್ಯೂ Z11xa 5G ಮೊಬೈಲ್ ನಾಳೆ (ಸೆಪ್ಟೆಂಬರ್ 14 ರಿಂದ) ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 8GB RAM + 128GB ಸ್ಟೋರೇಜ್ ವೇರಿಯಂಟ್ 28,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಟೈಟಾನ್ ಬ್ಲಾಕ್ ಮತ್ತು ಪ್ರಿಸ್ಮ್ಯಾಟಿಕ್ ಗ್ರೀನ್ ಕಲರ್ ಆಯ್ಕೆ ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್, ಐಕ್ಯೂ ವೆಬ್‌ಸೈಟ್, ಆಯ್ದ ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು ಮತ್ತು ಇತರ ರೀಟೇಲ್ ಸ್ಟೋರ್ ಮೂಲಕ ಖರೀದಿ ಮಾಡಬಹುದು.
ಐಕ್ಯೂ Z11xa 5G ಮೊಬೈಲ್ 6.76 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಅನ್ನು ಆಧರಿಸಿದ ವಿವೋದ Origin 6 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಐಕ್ಯೂ Z11xa 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.