ಇಂದಿನಿಂದ iQOO Z11x 5G ಸೇಲ್ ಪ್ರಾರಂಭ! 7,200mAh ಬ್ಯಾಟರಿ ಹೈಲೈಟ್
ಇಂದಿನಿಂದ (ಮಾರ್ಚ್ 16 ರಂದು) ಐಕ್ಯೂ Z11x 5G ಮಾರಾಟ ಶುರು
ಐಕ್ಯೂದ ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ
ಐಕ್ಯೂ ಕಂಪನಿಯ ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ
ಜನಪ್ರಿಯ ಐಕ್ಯೂ ಮೊಬೈಲ್ ಕಂಪನಿಯ ಹೊಸ iQOO Z11x 5G ಸ್ಮಾರ್ಟ್‌ಫೋನ್ ಮಾರಾಟ ಇಂದಿನಿಂದ (ಮಾರ್ಚ್ 16 ರಿಂದ) ಪ್ರಾರಂಭವಾಗಲಿದೆ. ಅಂದಹಾಗೆ ಈ ಮೊಬೈಲ್ ಬಜೆಟ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು 7,200mAh ಬ್ಯಾಟರಿ ಬ್ಯಾಕ್‌ಅಪ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 50MP ಕ್ಯಾಮೆರಾ ಸೆನ್ಸಾರ್ ಸೌಲಭ್ಯವನ್ನು ಒಳಗೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಐಕ್ಯೂ Z11x 5G ಸ್ಮಾರ್ಟ್‌ಫೋನ್ ಪ್ರಿಸ್ಮ್ಯಾಟಿಕ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಐಕ್ಯೂ Z11x 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Motorola Edge 60 Fusion 5G ಸ್ಮಾರ್ಟ್‌ಫೋನ್ ಖರೀದಿಸಲು ಇದೇ ಸರಿಯಾದ ಸಮಯ!
iQOO Z11x 5G ಮೊಬೈಲ್ ಬೆಲೆ ಹಾಗೂ ಲಭ್ಯತೆ
ಐಕ್ಯೂ ಕಂಪನಿಯ ಐಕ್ಯೂ Z11x 5G ಮೊಬೈಲ್ ಇಂದಿನಿಂದ (ಮಾರ್ಚ್ 16 ರಿಂದ) Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12 ಗಂಟೆಗೆ ಮಾರಾಟ ಪ್ರಾರಂಭ ಆಗಲಿದೆ. ಇನ್ನು ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 18,999 ರೂಗಳು ಆಗಿದೆ. ಹಾಗೆಯೇ 8GB RAM + 128GB ವೇರಿಯಂಟ್ ದರವು 20,999 ರೂಗಳು ಆಗಿದೆ. ಅದೇ ರೀತಿ 8GB RAM + 256GB ವೇರಿಯಂಟ್ ಬೆಲೆ 22,999 ರೂಗಳ ಆಗಿದೆ. ಈ ನೂತನ ಮೊಬೈಲ್ ಪ್ರಿಸ್ಮ್ಯಾಟಿಕ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಗ್ರಾಹಕರು Axis ಬ್ಯಾಂಕ್ ಮತ್ತು SBI ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000 ರೂಗಳ ವರೆಗೆ ಇನ್‌ಸ್ಟಂಟ್ ಡಿಸ್ಕೌಂಟ್ ಅನ್ನು ಪಡೆಯಬಹುದು.

ಐಕ್ಯೂ Z11x 5G ಫೀಚರ್ಸ್ ಹೀಗಿವೆ
ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಐಕ್ಯೂ Z11x 5G ಫೋನ್ 6.76 ಇಂಚಿನ LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,080×2,344 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 1,200 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಐಕ್ಯೂ Z11x 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP68 ಮತ್ತು IP69+ ರೇಟಿಂಗ್ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile