ದಸರಾ ಹಬ್ಬದ ಪ್ರಯುಕ್ತ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಐಕ್ಯೂ ಕಂಪನಿಯ iQOO Z11x 5G ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ MediaTek Dimensity 7400 Turbo ಚಿಪ್ಸೆಟ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಐಕ್ಯೂ Z11x ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ Realme Narzo 90x 5G ಮೊಬೈಲ್ ದರದಲ್ಲಿ ಭಾರೀ ಕಡಿತ!
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಐಕ್ಯೂ Z11x ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 45,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಪ್ರಿಸ್ಮ್ಯಾಟಿಕ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಐಕ್ಯೂ Z11x ಸ್ಮಾರ್ಟ್ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಐಕ್ಯೂ Z11x 5G ಫೋನ್ 6.76 ಇಂಚಿನ LCD ಡಿಸ್ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,080×2,344 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 1,200 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಐಕ್ಯೂ Z11x 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಒಳಗೊಂಡಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP68 ಮತ್ತು IP69+ ರೇಟಿಂಗ್ ಪಡೆದಿದೆ.
Disclosure: This Article Contains Affiliate Links