ಮಾರುಕಟ್ಟೆಯಲ್ಲಿ ಅಬ್ಬರಿಸಲು ನಾಳೆ ಬರ್ತಿದೆ iQOO Z11x 5G ಫೋನ್! 7,200mAh ಬ್ಯಾಟರಿ ಸಾಧ್ಯತೆ
ಮಾರ್ಚ್ 12 ರಂದು ಭಾರತದಕ್ಕೆ ಬರಲಿದೆ ಐಕ್ಯೂ Z11x ಸ್ಮಾರ್ಟ್‌ಫೋನ್
ಐಕ್ಯೂ Z11x ಮೊಬೈಲ್ ಡ್ಯುಯಲ್ ಕ್ಯಾಮೆರಾ ಪಡೆದಿರುವ ಸಾಧ್ಯತೆಗಳು ಇವೆ
ಐಕ್ಯೂ Z11x ಮೊಬೈಲ್ ಬ್ಲ್ಯಾಕ್ ಹಾಗೂ ಮಿಂಟ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಎಂಟ್ರಿ ಕೊಡಲಿದೆ
ಮಾರುಕಟ್ಟೆಯಲ್ಲಿ ಈಗಾಗಲೇ ಗಮನ ಸೆಳೆದಿರುವ iQOO ಕಂಪನಿಯು ತನ್ನ ಹೊಸ iQOO Z11x 5G ಮೊಬೈಲ್ ನಾಳೆ (ಮಾರ್ಚ್ 12 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ತೆರೆಯಲಾಗಿದೆ. ಐಕ್ಯೂ ಕಂಪನಿಯು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪಡೆದಿರುವುದು ಬಹುತೇಕ ಪಕ್ಕಾ ಆಗಿದೆ. ಇದರೊಂದಿಗೆ 7,200mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಹಾಗೆಯೇ ಇದು ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಪಡೆದಿರುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನುಳಿದಂತೆ ಮುಂಬರುವ ಐಕ್ಯೂ Z11x ಮೊಬೈಲ್‌ನ ಬಿಡುಗಡೆ ದಿನಾಂಕ, ನಿರೀಕ್ಷಿತ ಫೀಚರ್ಸ್‌ಗಳ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ ಲಾಂಚ್ ಆಗಿಯೇ ಬಿಡ್ತು Xiaomi 17 Ultra ಮೊಬೈಲ್! 200MP ಲೈಕಾ ಕ್ಯಾಮೆರಾ
iQOO Z11x 5G ಮೊಬೈಲ್ ಬಿಡುಗಡೆ ಮಾಹಿತಿ
ಐಕ್ಯೂ Z11x ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 12 ರಂದು) ಮಧ್ಯಾಹ್ನ 12 ಗಂಟೆಗೆ ದೇಶಿಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಅಮೆಜಾನ್ ಇ-ಕಾಮರ್ಸ್ ತಾಣದಲ್ಲಿ ನೂತನ ಐಕ್ಯೂ Z11x ಫೋನ್ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಈ ಮೊಬೈಲ್ ಎರಡು ಬಣ್ಣಗಳ ಆಯ್ಕೆ ಪಡೆದಿರಲಿದ್ದು ಅವುಗಳು ಕ್ರಮವಾಗಿ ಬ್ಲ್ಯಾಕ್ ಹಾಗೂ ಮಿಂಟ್ ಗ್ರೀನ್ ಕಲರ್ ಆಗಿರಲಿವೆ ಎಂದು ಹೇಳಲಾಗುತ್ತಿದೆ. ಇನ್ನು ಫೋನಿನ ಅಧಿಕೃತ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ. ಈ ಫೋನ್ ಅಮೆಜಾನ್ ಇ ಕಾಮರ್ಸ್ ಮೂಲಕ ಮಾರಾಟ ಪ್ರಾರಂಭಿಸಲಿದೆ.

ಐಕ್ಯೂ Z11x ಮೊಬೈಲ್ ನಿರೀಕ್ಷಿತ ಫೀಚರ್ಸ್
ಐಕ್ಯೂ Z11x ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸಪೋರ್ಟ್ ಜೊತೆಗೆ 6.72 ಇಂಚಿನ FHD+ IPS LCD ಪ್ಯಾನಲ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೇ ಈ ಮೊಬೈಲ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವುದು ಖಚಿತವಾಗಿದೆ. ಇನ್ನು ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 16 ಆಧಾರಿತ OriginOS 6 ಇರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಈ ಫೋನಿನ ಟಾಪ್ ಎಂಡ್ ವೇರಿಯಂಟ್ 8GB RAM ಮತ್ತು 256GB ಸ್ಟೋರೇಜ್ ಆಯ್ಕೆ ಪಡೆದಿರಲಿದೆ. ಅಲ್ಲದೇ ಈ ಮೊಬೈಲ್ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ.
ಅದೇ ರೀತಿ ಮುಂಬರುವ ಐಕ್ಯೂ Z11x ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಸೆಕೆಂಡರಿ ಕ್ಯಾಮೆರಾವು 8MP ಲೆನ್ಸ್ ಪಡೆದಿರಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಒದಗಿಸಬಹುದು. ಇದರೊಂದಿಗೆ ರಿಂಗ್ ಶೈಲಿಯ LED ಸಪೋರ್ಟ್ ಒಳಗೊಂಡಿದೆ ಎಂದು ತೋರುತ್ತದೆ ಹಾಗೂ ಸಿಮ್ ಟ್ರೇ ಅನ್ನು ಎಡ ಅಂಚಿನಲ್ಲಿ ನೀಡಲಾಗಿದೆ. ಇನ್ನು ಈ ಫೋನ್ ದೀರ್ಘ ಬ್ಯಾಟರಿ ಬಾಳಿಕೆಯನ್ನು ಬಯಸುವ ಗ್ರಾಹಕರನ್ನು ಗುರಿಯಾಗಿರಿಸಿಕೊಂಡು ಮಾರುಕಟ್ಟೆ ಪ್ರವೇಶಿಸುತ್ತಿದೆ ಎನ್ನಲಾಗಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile