iQOO ಸಂಸ್ಥೆಯು ತನ್ನ ನೂತನ iQOO Z11x 5G ಸ್ಮಾರ್ಟ್‌ಫೋನ್ ಅನ್ನು ಇಂದು (ಮಾರ್ಚ್ 12 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಫ್ಲ್ಯಾಗ್‌ಶಿಪ್ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್ ಒಳಗೊಂಡಿರುವ ಜೊತೆಗೆ 50MP ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 7,200mAh ಬ್ಯಾಕ್‌ಅಪ್ ಒದಗಿಸುವ ಬ್ಯಾಟರಿ ಸಪೋರ್ಟ್ ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಈ ಮೊಬೈಲ್ ಪ್ರಿಸ್ಮಾಟಿಕ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೆ ಐಕ್ಯೂ Z11x 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ ಲಾಂಚ್ ಆಗಿಯೇ ಬಿಡ್ತು Xiaomi 17 Ultra ಮೊಬೈಲ್! 200MP ಲೈಕಾ ಕ್ಯಾಮೆರಾ
ದೇಶಿಯ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಐಕ್ಯೂ Z11x 5G ಮೊಬೈಲ್ ಈಗಾಗಲೇ ಸ್ಟೈಲಿಶ್ ಲುಕ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 18,999 ರೂಗಳು ಆಗಿದೆ. ಹಾಗೆಯೇ 8GB RAM + 128GB ವೇರಿಯಂಟ್ ದರವು 20,999 ರೂಗಳು ಆಗಿದೆ. ಅದೇ ರೀತಿ 8GB RAM + 256GB ವೇರಿಯಂಟ್ ಬೆಲೆ 22,999 ರೂಗಳ ಆಗಿದೆ. ಅಂದಹಾಗೆ ಈ ಫೋನ್ ಇದೇ ಮಾರ್ಚ್ 16 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಮೂಲಕ ಮಾರಾಟಕ್ಕೆ ಬರಲಿದೆ. ಈ ನೂತನ ಮೊಬೈಲ್ ಪ್ರಿಸ್ಮ್ಯಾಟಿಕ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಗ್ರಾಹಕರು Axis ಬ್ಯಾಂಕ್ ಮತ್ತು SBI ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000 ರೂಗಳ ವರೆಗೆ ಇನ್‌ಸ್ಟಂಟ್ ರಿಯಾಯಿತಿಯನ್ನು ಪಡೆಯಬಹುದು.
ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಐಕ್ಯೂ Z11x 5G ಮೊಬೈಲ್ 6.76 ಇಂಚಿನ LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,080×2,344 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 1,200 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 7400 Turbo ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಐಕ್ಯೂ Z11x 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP68 ಮತ್ತು IP69+ ರೇಟಿಂಗ್ ಪಡೆದಿದೆ.