ಶೀಘ್ರದಲ್ಲೇ iQOO Z11x ಬಿಡುಗಡೆ! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ಮಾಹಿತಿ ನೋಡಿ

HIGHLIGHTS

ಹೊಸ ಐಕ್ಯೂ Z11x ಮೊಬೈಲ್ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ ಇಡಲಿದೆ

6,500mAh ಬ್ಯಾಟರಿ ಸೌಲಭ್ಯವನ್ನು ಐಕ್ಯೂ Z11x ಮೊಬೈಲ್ ಒಳಗೊಂಡಿರಲಿದೆ

ಈ ಮೊಬೈಲ್‌ 8GB RAM ಮತ್ತು 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿರಲಿದೆ

ಜನಪ್ರಿಯ iQOO ಕಂಪನಿಯು ಭಾರತದಲ್ಲಿ ಹೊಸದಾಗಿ iQOO Z11x ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಲು ತಯಾರಿ ನಡೆಸುತ್ತಿದೆ. ಶೀಘ್ರದಲ್ಲೇ ಎಂಟ್ರಿ ಕೊಡಲಿರುವ ಈ ಸ್ಮಾರ್ಟ್‌ಫೋನ್‌ ಅತ್ಯಂತ ಕೈಗೆಟುಕುವ ಪ್ರೈಸ್‌ಟ್ಯಾಗ್‌ನಲ್ಲಿ ಲಗ್ಗೆ ಇಡುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಮೊಬೈಲ್‌ MediaTek Dimensity 7400 Turbo ಪ್ರೊಸೆಸರ್‌ ಪಡೆದಿರುವುದು ಬಹುತೇಕ ಕನ್ಫರ್ಮ್‌ ಆಗಿದೆ. ಅಲ್ಲದೇ ಮುಂಬರುವ ಈ ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್‌ ಜೊತೆಗೆ 6,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆಗಳು ಅಧಿಕವಾಗಿವೆ. ಹಾಗೆಯೇ ಇದು ಆಂಡ್ರಾಯ್ಡ್ 16 ಓಎಸ್‌ ಸಪೋರ್ಟ್‌ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗಾದರೆ ಮುಂಬರುವ iQOO Z11x ಸ್ಮಾರ್ಟ್‌ಫೋನ್‌ ಲಾಂಚ್ ದಿನಾಂಕ, ನಿರೀಕ್ಷಿತ ಫೀಚರ್ಸ್‌ಗಳ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಗ್ರಾಹಕರಿಗೆ ಸಿಹಿಸುದ್ದಿ! ಈ ಅಗ್ಗದ ಪ್ಲಾನಿನಲ್ಲಿ ಪ್ರತಿದಿನ 2GB ಡೇಟಾ ಜೊತೆಗೆ 10 OTT ಲಭ್ಯ

iQOO Z11x ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ

iQOO ಮೊಬೈಲ್‌ ಕಂಪನಿಯಿಂದ ಮಾರುಕಟ್ಟೆಗೆ ಲಗ್ಗೆ ಇಡಲಿರುವ iQOO Z11x ಸ್ಮಾರ್ಟ್‌ಫೋನಿನ ಬಿಡುಗಡೆ ದಿನಾಂಕ ಅಧಿಕೃತವಾಗಿ ಇನ್ನು ಘೋಷಣೆ ಆಗಿಲ್ಲ. ಆದರೆ ಅತೀ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆ ಈ ಫೋನ್ ಲಾಂಚ್‌ ಆಗಲಿದೆ ಎಂದು ಲೀಕ್‌ ವರದಿಗಳು ಸೂಚಿಸುತ್ತಿವೆ. ಈ ಫೋನ್‌ ಲಾಂಚ್‌ ಕುರಿತಾಗಿ ಮೈಕ್ರೋಪೇಜ್‌ ಕೂಡಾ ತೆರೆಯಲಾಗಿದೆ. ಇನ್ನು ಈ ಮೊಬೈಲ್‌ ಬಜೆಟ್‌ ಬೆಲೆಯಲ್ಲಿ ಅಂದರೆ ಸುಮಾರು 25,000 ರೂ.ಗಳ ಒಳಗೆ ಮಾರುಕಟ್ಟೆ ಪ್ರವೇಶಿಸಬಹುದು ಎಂದು ಹೇಳಲಾಗುತ್ತಿದೆ. ಈ ಫೋನ್‌ ಮಿಂಟ್‌ ಕಲರ್‌ ಆಯ್ಕೆ ಒಳಗೊಂಡಿರಬಹುದು ಎಂದು ಟೀಸರ್ ಫೋಟೋ ಸೂಚಿಸುತ್ತದೆ.

ಐಕ್ಯೂ Z11x ಮೊಬೈಲ್‌ ನಿರೀಕ್ಷಿತ ಫೀಚರ್ಸ್‌

ಮುಂಬರುವ iQOO Z11x ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಜೊತೆಗೆ 6.72 ಇಂಚಿನ FHD+ IPS LCD ಪ್ಯಾನಲ್ ಡಿಸ್‌ಪ್ಲೇ ಪಡೆದಿರಲಿದೆ ಎನ್ನಲಾಗಿದೆ. ಅಲ್ಲದೇ ಈ ಮೊಬೈಲ್‌ MediaTek Dimensity 7400 Turbo ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವುದು ಖಚಿತವಾಗಿದೆ. ಇನ್ನು ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 16 ಆಧಾರಿತ OriginOS 6 ಇರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಈ ಫೋನಿನ ಟಾಪ್‌ ಎಂಡ್‌ ವೇರಿಯಂಟ್‌ 8GB RAM ಮತ್ತು 256GB ಸ್ಟೋರೇಜ್ ಆಯ್ಕೆ ಪಡೆದಿರಲಿದೆ. ಅಲ್ಲದೇ ಈ ಮೊಬೈಲ್‌ 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಒಳಗೊಂಡಿರಬಹುದು ಎಂದು ನಿರೀಕ್ಷಿಸಲಾಗಿದೆ.

ಅದೇ ರೀತಿ ಮುಂಬರುವ ಐಕ್ಯೂ Z11x ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಬಲ ಪಡೆದಿರುವ ಜೊತೆಗೆ ಸೆಕೆಂಡರಿ ಕ್ಯಾಮೆರಾವು 8MP ಲೆನ್ಸ್‌ ಪಡೆದಿರಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಒದಗಿಸಬಹುದು. ಇದರೊಂದಿಗೆ ರಿಂಗ್ ಶೈಲಿಯ LED ಸಪೋರ್ಟ್ ಒಳಗೊಂಡಿದೆ ಎಂದು ತೋರುತ್ತದೆ ಹಾಗೂ ಸಿಮ್ ಟ್ರೇ ಅನ್ನು ಎಡ ಅಂಚಿನಲ್ಲಿ ಇರಿಸಲಾಗಿದೆ. ಇನ್ನು ಈ ಫೋನ್‌ ದೀರ್ಘ ಬ್ಯಾಟರಿ ಬಾಳಿಕೆಯನ್ನು ಬಯಸುವ ಗ್ರಾಹಕರನ್ನು ಗುರಿಯಾಗಿರಿಸಿಕೊಂಡು ಮಾರುಕಟ್ಟೆ ಪ್ರವೇಶಿಸುತ್ತಿದೆ ಎನ್ನಲಾಗಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :