ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ iQOO Z11xa 5G ಸ್ಮಾರ್ಟ್‌ಫೋನ್‌! ಬೆಲೆ ಹಾಗೂ ಫೀಚರ್ಸ್‌

HIGHLIGHTS

ಐಕ್ಯೂ Z11xa 5G ಫೋನ್‌ 7,200mAh ಬ್ಯಾಟರಿ ಪಡೆದುಕೊಂಡಿದೆ

ಐಕ್ಯೂ Z11xa 5G ಸ್ಮಾರ್ಟ್‌ಫೋನ್‌ 50MP ಕ್ಯಾಮೆರಾ ಒಳಗೊಂಡಿದೆ

ಐಕ್ಯೂದ ಈ ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ಐಕ್ಯೂ ಮೊಬೈಲ್‌ ಸಂಸ್ಥೆಯು ನೂತನವಾಗಿ iQOO Z11xa 5G ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 7,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟೈಟಾನ್ ಬ್ಲಾಕ್ ಮತ್ತು ಪ್ರಿಸ್ಮ್ಯಾಟಿಕ್ ಗ್ರೀನ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ಐಕ್ಯೂ Z11xa 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Vivo T5 vs Realme P4s: ಈ ಎರಡು ಫೋನ್‌ಗಳ ಪ್ರಮುಖ ಭಿನ್ನತೆಗಳೇನು? ಖರೀದಿಗೆ ಯಾವ ಮೊಬೈಲ್‌ ಬೆಸ್ಟ್‌?

iQOO Z11xa 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಐಕ್ಯೂ ಕಂಪನಿಯ ಐಕ್ಯೂ Z11xa 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 28,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಟೈಟಾನ್ ಬ್ಲಾಕ್ ಮತ್ತು ಪ್ರಿಸ್ಮ್ಯಾಟಿಕ್ ಗ್ರೀನ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್‌ ಸೆಪ್ಟೆಂಬರ್ 14 ರಂದು ಮಧ್ಯಾಹ್ನ 12 ಗಂಟೆಯಿಂದ ಅಮೆಜಾನ್, ಐಕ್ಯೂ ವೆಬ್‌ಸೈಟ್, ಆಯ್ದ ವಿವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು ಮತ್ತು ಇತರ ರೀಟೇಲ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ.

iQOO Z11xa 5G

ಐಕ್ಯೂ Z11xa 5G ಮೊಬೈಲ್‌ ಫೀಚರ್ಸ್‌

ಐಕ್ಯೂ Z11xa 5G ಮೊಬೈಲ್‌ 6.76 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP68 + IP69 ರೇಟಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಅನ್ನು ಆಧರಿಸಿದ ವಿವೋದ Origin 6 ಓಎಸ್ ಸಪೋರ್ಟ್ ಪಡೆದಿದೆ.

ಹಾಗೆಯೇ ಐಕ್ಯೂ Z11xa 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :