iQOO Z11xa 5G price in India Sale today Amazon offers specification
ಅಮೆಜಾನ್ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ iQOO Z11xa 5G ಮೊಬೈಲ್ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 7,200mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಐಕ್ಯೂ Z11xa 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಇಂದಿನಿಂದ iPhone Duo ಫೋಲ್ಡೆಬಲ್ ಫೋನ್ ಸೇಲ್ ಪ್ರಾರಂಭ; ಬೆಲೆ ಹಾಗೂ ಲಭ್ಯತೆ ನೋಡಿ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಐಕ್ಯೂ Z11xa 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 40,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 28,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಟೈಟಾನ್ ಬ್ಲಾಕ್ ಮತ್ತು ಪ್ರಿಸ್ಮ್ಯಾಟಿಕ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಐಕ್ಯೂ Z11xa 5G ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಐಕ್ಯೂ Z11xa 5G ಮೊಬೈಲ್ 6.76 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಅನ್ನು ಆಧರಿಸಿದ ವಿವೋದ Origin 6 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಐಕ್ಯೂ Z11xa 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
Disclosure: This Article Contains Affiliate Links