iQOO Z11xa 5G with 7200mAh battery phone launched in India Price under 30000
ಅಮೆಜಾನ್ ಇ ಕಾಮರ್ಸ್ ಕಂಪನಿಯ Amazon Great Freedom Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಶುರುವಾಗಲಿದೆ. ಈ ಮಾರಾಟ ಪ್ರಾರಂಕ್ಕೂ ಮುನ್ನವೇ ಅಮೆಜಾನ್ ತಾಣವು ಮೊಬೈಲ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಡೀಲ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು ಡಿವೈಸ್‌ಗಳನ್ನು ಖರೀದಿಸುವ ಅವಕಾಶವನ್ನು ಲಭ್ಯವಾಗಿದೆ. ಈ ಮಾರಾಟದಲ್ಲಿ iQOO Z11xa 5G ಮೊಬೈಲ್ ಆಕರ್ಷಕ ಕೊಡುಗೆ ಪಡೆದಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ ಖರೀದಿದಾರರು ಹೆಚ್ಚುವರಿ ರಿಯಾಯಿತಿಯನ್ನೂ ಪಡೆಯಬಹುದು. ಹಾಗಾದರೆ ಅಮೆಜಾನ್‌ನಲ್ಲಿ ಐಕ್ಯೂ Z11xa 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆಯ ಬಗ್ಗೆ ಮುಂದೆ ತಿಳಿಯೋಣ.
Also Read : ಭಾರತದಲ್ಲಿ OPPO F35 ಫೋನ್ ಸರಣಿ ಲಾಂಚ್‌ಗೆ ಡೇಟ್ ಫಿಕ್ಸ್; ಜಬರ್ದಸ್ತ್ ಫೀಚರ್ಸ್ ನಿರೀಕ್ಷೆ
ಐಕ್ಯೂ ಕಂಪನಿಯ ಇತ್ತೀಚಿನ ಐಕ್ಯೂ Z11xa 5G ಸ್ಮಾರ್ಟ್‌ಫೋನ್ ಸದ್ಯದಲ್ಲೇ ಪ್ರಾರಂಭವಾಗಲಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2026 ಸೇಲ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಅಮೆಜಾನ್‌ನಲ್ಲಿ ಐಕ್ಯೂ Z11xa 5G ಮೊಬೈಲ್‌ನ 8GB RAM + 128GB ವೇರಿಯಂಟ್ ಬೆಲೆ 40,999 ರೂ.ಗಳ ಬೆಲೆಯನ್ನು ಹೊಂದಿದೆ. ಆದರೆ ಪ್ರಸ್ತುತ ಇದರ ಬೆಲೆ 28,999 ರೂ.ಗಳು ಎಂದು ಲಿಸ್ಟ್ ಮಾಡಲಾಗಿದೆ.
ಐಕ್ಯೂ Z11xa 5G ಮೊಬೈಲ್ 6.76 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 7400 ಟರ್ಬೊ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP68 + IP69 ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಅನ್ನು ಆಧರಿಸಿದ ವಿವೋದ Origin 6 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಐಕ್ಯೂ Z11xa 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,200mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.