ಅಗ್ಗದ ಬೆಲೆಯಲ್ಲಿ Itel Zeno 200 ಮೊಬೈಲ್ ಲಾಂಚ್! ಬೆಲೆ ಹಾಗೂ ಫೀಚರ್ಸ್ ಹೀಗಿವೆ
ಐಟೆಲ್ ಝೀನೋ 200 ಫೋನ್ ಅಗ್ಗದ ದರದಲ್ಲಿ ಲಗ್ಗೆ ಇಟ್ಟಿದೆ
ಐಟೆಲ್ ಝೀನೋ 200 ಮೊಬೈಲ್ 13MP ಕ್ಯಾಮೆರಾ ರಚನೆ ಪಡೆದುಕೊಂಡಿದೆ
ಐಟೆಲ್ ಝೀನೋ 200 ಫೋನ್ 5,000 mAh ಬ್ಯಾಟರಿ ಸೌಲಭ್ಯ ಒಳಗೊಂಡಿದೆ
ಅಗ್ಗದ ದರದ ಮೊಬೈಲ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಐಟೆಲ್ ಸಂಸ್ಥೆಯು ಹೊಸದಾಗಿ Itel Zeno 200 ಸ್ಮಾರ್ಟ್‌ಫೋನ್ ಅನ್ನು ಇಂದು (ಮೇ 8 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಮಾಡಿದೆ. ಎಂಟ್ರಿ ಲೆವೆಲ್ ವಿಭಾಗದಲ್ಲಿ ಲಗ್ಗೆ ಇಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ ಇದು ಕಾಮೆಟ್ ಆರೆಂಜ್, ಮೀಟಿಯರ್ ಟೈಟಾನಿಯಂ ಮತ್ತು ನೈಟ್ಲಿ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ಐಟೆಲ್ ಝೀನೋ 200 ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಮೇ 12 ರಂದು OnePlus Nord CE 6 Lite ಸ್ಮಾರ್ಟ್‌ಫೋನ್ ಸೇಲ್ ಪ್ರಾರಂಭ!
Itel Zeno 200 ಬೆಲೆ ಹಾಗೂ ಲಭ್ಯತೆ
ನೂತನ ಐಟೆಲ್ ಝೀನೋ 200 ಸ್ಮಾರ್ಟ್‌ಫೋನ್ ಸಿಂಗಲ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 4GB RAM + 128 GB ಸ್ಟೋರೇಜ್ ವೇರಿಯಂಟ್ ಬೆಲೆ 10,399 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಕಾಮೆಟ್ ಆರೆಂಜ್, ಮೀಟಿಯರ್ ಟೈಟಾನಿಯಂ ಮತ್ತು ನೈಟ್ಲಿ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಪ್ರಸ್ತುತ ಅಮೆಜಾನ್ ತಾಣದ ಮೂಲಕ 549 ರೂ.ಗಳ ಎಕ್ಸ್‌ಚೇಂಜ್ ಬೋನಸ್‌ನೊಂದಿಗೆ ಖರೀದಿಸಲು ಲಭ್ಯವಿದೆ.

ಐಟೆಲ್ ಝೀನೋ 200 ಮೊಬೈಲ್ ಫೀಚರ್ಸ್
ಹೊಸ ಐಟೆಲ್ ಝೀನೋ 200 ಮೊಬೈಲ್ 6.75 ಇಂಚಿನ HD+ IPS LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 720 x 1,600 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದ್ದು, ಜೊತೆಗೆ 590 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಐಟೆಲ್ ಝೀನೋ 200 ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP65 ರೇಟಿಂಗ್ ಜೊತೆಗೆ MIL-STD-810H ಪ್ರಮಾಣೀಕರಣವನ್ನು ಹೊಂದಿದೆ.
ಹಾಗೆಯೇ ಐಟೆಲ್ ಝೀನೋ 200 ಮೊಬೈಲ್ ಹಿಂಬದಿಯಲ್ಲಿ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದೆ. ಇದರ ಜೊತೆಗೆ LED ಫ್ಲ್ಯಾಷ್ ಅನ್ನು ಪಡೆದುಕೊಂಡಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 1080p/30 fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile