ಭಾರತದಲ್ಲಿ Lava Bold 2 5G ಮೊಬೈಲ್‌ ಬಿಡುಗಡೆ! ಆರಂಭಿಕ ಬೆಲೆ 12,999 ರೂಗಳು

HIGHLIGHTS

ಮಾರ್ಚ್‌ 19 ರಂದು ಲಾವಾ ಬೋಲ್ಡ್‌ 2 5G ಫೋನ್‌ ಸೇಲ್‌ ಶುರು

ಲಾವಾ ಬೋಲ್ಡ್‌ 2 5G ಮೊಬೈಲ್‌ 50MP ಕ್ಯಾಮೆರಾ ಸೆನ್ಸಾರ್‌ ಪಡೆದುಕೊಂಡಿದೆ

ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್‌ ಸೌಲಭ್ಯ ಒಳಗೊಂಡಿದೆ

Lava ಸಂಸ್ಥೆಯು ತನ್ನ ಹೊಸ Lava Bold 2 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಮಾರ್ಚ್ 13 ರಂದು) ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7060 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದ ಜೊತೆಗೆ 50MP ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 5,000mAh ಬ್ಯಾಕ್‌ಅಪ್‌ ಒದಗಿಸುವ ಬ್ಯಾಟರಿ ಸಪೋರ್ಟ್‌ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿದೆ. ಈ ಮೊಬೈಲ್‌ ಫೆದರ್ ವೈಟ್‌ ಮತ್ತು ಮೀಡ್‌ನೈಟ್‌ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೆ ಲಾವಾ ಬೋಲ್ಡ್‌ 2 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಇಂದಿನಿಂದ Xiaomi 17 Ultra ಪ್ರೀ-ಆರ್ಡರ್ ಪ್ರಾರಂಭ! ಇದು ದೈತ್ಯ ಫೀಚರ್ಸ್‌ ಇರುವ ಫೋನ್‌

Lava Bold 2 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ಮಾರುಕಟ್ಟೆ ಪ್ರವೇಶಿಸಿರುವ ಲಾವಾ ಬೋಲ್ಡ್‌ 2 5G ಮೊಬೈಲ್‌ ಅಗ್ಗದ ಬೆಲೆಯ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 12,999 ರೂಗಳು ಆಗಿದೆ. ಇನ್ನು ಈ ಮೊಬೈಲ್‌ ಇದೇ ಮಾರ್ಚ್ 19 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸೇಲ್‌ ಪ್ರಾರಂಭ ಮಾಡಲಿದೆ. ಹಾಗೆಯೇ ಲಾವಾ ಬೋಲ್ಡ್ 2 5G ಫೋನ್ ಫೆದರ್ ವೈಟ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ದೊರೆಯುತ್ತದೆ.

ಲಾವಾ ಬೋಲ್ಡ್‌ 2 5G ಫೀಚರ್ಸ್‌ ಹೀಗಿವೆ

ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಟ್ಟಿರುವ ಲಾವಾ ಬೋಲ್ಡ್‌ 2 5G ಮೊಬೈಲ್ 6.6.67 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7060 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ. ಇದು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಆಗಿದ್ದು ಆಂಡ್ರಾಯ್ಡ್ 15 ಓಎಸ್‌ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಲಾವಾ ಬೋಲ್ಡ್‌ 2 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಎರಡನೇ ಕ್ಯಾಮೆರಾ ಬೇಸಿಕ್ ಲೆನ್ಸ್‌ ಸೌಲಭ್ಯ ಹೊಂದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 33W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್‌ ಸೌಲಭ್ಯ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :