ಲಾವಾ ಮೊಬೈಲ್ ಕಂಪನಿಯ ನೂತನ Lava Bold 2 5G ಮೊಬೈಲ್ ನಾಳೆ (ಮಾರ್ಚ್ 13 ರಂದು) ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಫೋನ್ ಬಜೆಟ್ ದರದಲ್ಲಿ ಎಂಟ್ರಿ ಕೊಡುವ ನಿರೀಕ್ಷೆ ಇದ್ದು ಕೆಲವು ಫೀಚರ್ಸ್ ಮೂಲಕ ಕುತೂಹಲ ಮೂಡಿಸಿದೆ. ಮುಂಬರುವ ಲಾವಾ ಬೋಲ್ಡ್ 2 5G ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಒಳಗೊಂಡಿರುವ ಸಾಧ್ಯತೆಗಳು ಇವೆ. ಇನ್ನುಳಿದಂತೆ ಮುಂಬರುವ ಲಾವಾ ಬೋಲ್ಡ್ 2 5G ಮೊಬೈಲ್ ಬಿಡುಗಡೆ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್ ಸೇರಿದಂತೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಬಜೆಟ್ ಬೆಲೆಯಲ್ಲಿ iQOO Z11x 5G ಮೊಬೈಲ್ ಬಿಡುಗಡೆ! ಸ್ಟೈಲಿಶ್ ಲುಕ್ ಜೊತೆಗೆ 7,200mAh ಬ್ಯಾಟರಿ
ಲಾವಾ ಸಂಸ್ಥೆಯು ಲಾವಾ ಬೋಲ್ಡ್ 2 5G ಸ್ಮಾರ್ಟ್‌ಫೋನ್ ನಾಳೆ (ಮಾರ್ಚ್ 13 ರಂದು) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಮಾಡಲಾಗುವುದು ಎಂದು ಕಂಪನಿಯು ದೃಢಪಡಿಸಿದೆ. ಅಂದಹಾಗೆ ಈ ಮೊಬೈಲ್ ಬ್ರೈಟರ್, ಸ್ಲಿಮ್ಮರ್, ಬೋಲ್ಡರ್ ಎಂಬ ಟ್ಯಾಗ್ ಲೈನ್‌ನೊಂದಿಗೆ ಎಂಟ್ರಿ ಕೊಡುವ ಸೂಚನೆ ನೀಡಿದೆ. ಈ ಮೊಬೈಲ್‌ಗಾಗಿ ಮೀಸಲಾದ ಮೈಕ್ರೋಸೈಟ್ ಈಗ ಅಮೆಜಾನ್ ಇ ಕಾಮರ್ಸ್‌ನಲ್ಲಿ ಲೈವ್ ಆಗಿದೆ. ಹಾಗೆಯೇ ಲಾವಾ ಬೋಲ್ಡ್ 2 5G ಮೊಬೈಲ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಆನ್‌ಲೈನ್‌ನಲ್ಲಿ ಖರೀದಿಸಲು ಪ್ರತ್ಯೇಕವಾಗಿ ಲಭ್ಯವಿರುತ್ತದೆ ಎನ್ನಲಾಗಿದೆ.
ಹಾಗೆಯೇ ಲಾವಾ ಬೋಲ್ಡ್ 5G ಮೊಬೈಲ್ ಆಯತಾಕಾರದ ಕ್ಯಾಮೆರಾ ಮಾಡ್ಯೂಲ್ ಸೆಟ್‌ಅಪ್ ಅನ್ನು ಒಳಗೊಂಡಿರಲಿದ್ದು ಇದು ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿರಲಿದೆ. ಅಲ್ಲದೇ ಈ ಮೊಬೈಲ್ ಫ್ಲಾಟ್ ಫ್ರೇಮ್ ಮತ್ತು ಫ್ಲಾಟ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿರಲಿದೆ ಜೊತೆಗೆ ಹಿಂಭಾಗದಲ್ಲಿ LED ಫ್ಲ್ಯಾಷ್ ಅನ್ನು ಪಡೆದಿರಲಿದೆ. ಇನ್ನು ಮೊಬೈಲ್‌ನ ಬಲಭಾಗದಲ್ಲಿ ಪವರ್ ಬಟನ್ ಮತ್ತು ವಾಲ್ಯೂಮ್ ಕಂಟ್ರೋಲ್ ಬಟನ್ ಒಳಗೊಂಡಿರಲಿದೆ. ಇನ್ನು ಫೋನಿನ ಅಧಿಕೃತ ಲಾಂಚ್ ಡೇಟ್ ಬಗ್ಗೆ ಇನ್ನು ಯಾವುದೇ ಮಾಹಿತಿ ಇಲ್ಲ.
ಲಾವಾ ಸಂಸ್ಥೆಯ ಈ ಹಿಂದಿನ ಲಾವಾ ಬೋಲ್ಡ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 6GB ವರೆಗೆ RAM ಮತ್ತು 128GB ವರೆಗೆ ಆನ್‌ಬೋರ್ಡ್ ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಹಿಂಭಾಗದಲ್ಲಿ ಸೋನಿ ಸೆನ್ಸಾರ್ ಒಳಗೊಂಡ 64 ಮೆಗಾಪಿಕ್ಸೆಲ್ AI ಬೆಂಬಲಿತ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಅಲ್ಲದೇ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್ ಸೌಲಭ್ಯ ಪಡೆದಿದೆ.