ಲಾವಾ ಇತ್ತೀಚಿಗೆ ಬಿಡುಗಡೆ ಮಾಡಿರುವ Lava Bold N1 5G ಫೋನಿನ 6GB RAM + 128GB ನೂತನ ವೇರಿಯಂಟ್ ಮೊಬೈಲ್ ಆಕರ್ಷಕ ಎನಿಸಿದೆ. ಈ ಸ್ಮಾರ್ಟ್‌ಫೋನ್ ಇಂದು (ಮೇ 1 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಇನ್ನು ಈ ಮೊಬೈಲ್ ಆಕ್ಟಾ-ಕೋರ್ ಯುನಿಸಾಕ್ T765 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿರುವ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಹಾಗೆಯೇ ಸ್ಮಾರ್ಟ್‌ಫೋನ್ ಅಲ್ಲದೇ ಇದು ಷಾಂಪೇನ್ ಗೋಲ್ಡ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಲಾವಾ ಬೋಲ್ಡ್ N1 5G ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಡಿಸೈನ್ ಇರುವ Redmi 15C ಮೊಬೈಲ್ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್!
ಲಾವಾ ಬೋಲ್ಡ್ N1 5G ಮೊಬೈಲ್ ಸ್ಮಾರ್ಟ್‌ಫೋನ್ ಅಗ್ಗದ ದರದಲ್ಲಿ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಮೊಬೈಲ್ ಇಂದು (ಮೇ 1 ರಂದು) ಮಧ್ಯಾಹ್ನ 12 ರಂದು ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಿದೆ. ಲಾವಾ ಬೋಲ್ಡ್ N1 5G ಮೊಬೈಲ್ ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್ 12,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಆರಂಭಿಕ ಕೊಡುಗೆಯಾಗಿ ಅಮೆಜಾನ್‌ನಲ್ಲಿ 11,999 ರೂ.ಗಳಿಗೆ ಲಭ್ಯ. ಅಂದಹಾಗೆ ಈ ಫೋನ್ ಈಗ 4GB RAM + 64GB ಮತ್ತು 4GB RAM + 128GB ವೇರಿಯಂಟ್ ಆಯ್ಕೆಗಳಲ್ಲಿ ಸಿಗುತ್ತದೆ. ಇನ್ನು ಹೊಸದಾಗಿ 6GB RAM + 128GB ವೇರಿಯಂಟ್‌ನಲ್ಲಿ ಲಭ್ಯ. ಇನ್ನು ಈ ಫೋನ್ ಷಾಂಪೇನ್ ಗೋಲ್ಡ್ ಮತ್ತು ರಾಯಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ಹೊಸ ಲಾವಾ ಬೋಲ್ಡ್ N1 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 90Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 2.5D ಗ್ಲಾಸ್ ರಕ್ಷಣೆಯನ್ನು ಪಡೆದಿರುವ ಜೊತೆಗೆ 20:9 ಆಕಾರ ಅನುಪಾತವನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ ಯುನಿಸಾಕ್ T765 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಬಾಹ್ಯ ಮೆಮೊರಿಯನ್ನು 1TB ವರೆಗೂ ವಿಸ್ತರಿಸುವ ಅವಕಾಶ ಪಡೆದಿದೆ.
ಹಾಗೆಯೇ ಲಾವಾ ಬೋಲ್ಡ್ N1 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 10W ವೈರ್ಡ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.