Lava Bold N2
ಲಾವಾ ಕಂಪನಿಯ Lava Bold N2 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : BSNL ಟೆಲಿಕಾಂನ ಈ ಬಜೆಟ್ ಪ್ಲಾನ್‌ನಲ್ಲಿ 300 ದಿನಗಳ ವ್ಯಾಲಿಡಿಟಿ ಜೊತೆಗೆ ಆಕರ್ಷಕ ಡೇಟಾ
ತನ್ನ ವರ್ಗದಲ್ಲೇ ಉತ್ತಮ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಲಾವಾ ಬೋಲ್ಡ್ N2 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಲಾವಾ ಬೋಲ್ಡ್ N2 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.