ಬಜೆಟ್ ಬೆಲೆಯಲ್ಲಿ Lava Bold N2 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜು! ನಾಳೆಯೇ ಲಾಂಚ್
ನಾಳೆ ಲಾವಾ ಬೋಲ್ಡ್ N2 5G ಮೊಬೈಲ್ ಮಾರುಕಟ್ಟೆಗೆ ಎಂಟ್ರಿ
ಲಾವಾ ಬೋಲ್ಡ್ N2 5G ಮೊಬೈಲ್ 18W ಚಾರ್ಜಿಂಗ್ ಸಪೋರ್ಟ್ ಸಾಧ್ಯತೆ
ಲಾವಾ ಸಂಸ್ಥೆಯ ಈ ಫೋನ್ 13MP ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದಿರಲಿದೆ
ದೇಶೀಯ ಮೊಬೈಲ್ ಮಾರುಕಟ್ಟೆಯಲ್ಲಿ Lava ಸಂಸ್ಥೆಯು ಕೆಲವು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಕಂಪನಿಯು ಇದೀಗ ತನ್ನ Bold ಸರಣಿಯಲ್ಲಿ ಹೊಸದಾಗಿ Lava Bold N2 5G ಸ್ಮಾರ್ಟ್‌ಫೋನ್ ಪರಿಚಯಿಸಲು ಸಿದ್ಧವಾಗಿದೆ. ಲಾವಾ ಬೋಲ್ಡ್ N2 5G ಮೊಬೈಲ್ ಇದೇ ಜೂನ್ 3 ರಂದು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಇನ್ನು ಮುಂಬರುವ ಲಾವಾ ಬೋಲ್ಡ್ N2 5G ಮೊಬೈಲ್ ಲಾಂಚ್ ಕುರಿತು ಅಮೆಜಾನ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಈ ಫೋನ್ 13MP ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಹಾಗಾದರೆ ಮಾರುಕಟ್ಟೆಗೆ ಲಗ್ಗೆ ಇಡುವ ಲಾವಾ ಬೋಲ್ಡ್ N2 5G ಮೊಬೈಲ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 10,001mAh ಬ್ಯಾಟರಿ ಮೂಲಕ ಗಮನ ಸೆಳೆದಿರುವ realme P4 Power 5G ಬೆಲೆಯಲ್ಲಿ ಈಗ ಇಳಿಕೆ!
Lava Bold N2 5G ಮೊಬೈಲ್ ಲಾಂಚ್ ಮಾಹಿತಿ
ಲಾವಾ ಕಂಪನಿಯ ಲಾವಾ ಬೋಲ್ಡ್ N2 5G ಮೊಬೈಲ್ ಇದೇ ಜೂನ್ 3 ರಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಕುರಿತು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ಲೈವ್ ಮಾಡಲಾಗಿದೆ. ಅಲ್ಲದೇ ಲಾಂಚ್ ಬಳಿಕ ಈ ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಫೋನ್ ಬ್ಲೂ ಕಲರ್ ಆಯ್ಕೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಗಳು ಇವೆ.

ಲಾವಾ ಬೋಲ್ಡ್ N2 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್
ಲಾವಾ ಬೋಲ್ಡ್ N2 5G ಮೊಬೈಲ್ ಬ್ಲೂ ಕಲರ್ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಈ ಮೊಬೈಲ್ ಹಿಂಭಾಗದಲ್ಲಿ 13MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಇರಲಿದ್ದು ಅದರ ಜೊತೆಗೆ LED ಫ್ಲ್ಯಾಷ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಯಿದೆ. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್ Unisoc 9863A ಚಿಪ್‌ಸೆಟ್ ಪ್ರೊಸೆಸರ್ ಹೊಂದಿರುವ ನಿರೀಕ್ಷೆಗಳು ಇವೆ.
ಲಾವಾ ಬೋಲ್ಡ್ N2 5G ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿರಲಿದ್ದು ಇದು 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆಯಬಹುದು. ಹಾಗೆಯೇ ಈ ಸ್ಮಾರ್ಟ್‌ಫೋನ್ 18W ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆಯುವ ಸಾಧ್ಯತೆ ಇದೆ. ಟೀಸರ್‌ನಿಂದ ತಿಳಿದಂತೆ ಈ ಫೋನ್‌ನ ಬಲಭಾಗದಲ್ಲಿ ಪವರ್ ಬಟನ್ ಮತ್ತು ವಾಲ್ಯೂಮ್ ಕಂಟ್ರೋಲ್‌ಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೇ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5mm ಆಡಿಯೊ ಜ್ಯಾಕ್ ಮತ್ತು ಸ್ಪೀಕರ್ ಗ್ರಿಲ್ ಅನ್ನು ಫೋನಿನ ಕೆಳಭಾಗದಲ್ಲಿ ನೀಡಲಾಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
