ಅಗ್ಗದ ಮೊಬೈಲ್‌ಗಳ ಮೂಲಕ ಗಮನ ಸೆಳೆದಿರುವ Lava ಸಂಸ್ಥೆಯು ಇದೀಗ ತನ್ನ Bold ಸರಣಿಯಲ್ಲಿ ಹೊಸ ಫೋನ್ ಪರಿಚಯಿಸಲು ಸಜ್ಜಾಗಿದೆ. ಅದುವೇ Lava Bold N2 5G ಸ್ಮಾರ್ಟ್‌ಫೋನ್ ಆಗಿದೆ. ಈ ನೂತನ ಲಾವಾ ಬೋಲ್ಡ್ N2 5G ಮೊಬೈಲ್ ಇಂದು (ಜೂನ್ 3 ರಂದು) ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಆಗಲಿದೆ. ಇನ್ನು ಮುಂಬರುವ ಲಾವಾ ಬೋಲ್ಡ್ N2 5G ಮೊಬೈಲ್ ಲಾಂಚ್ ಕುರಿತು ಅಮೆಜಾನ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಈ ಫೋನ್ 13MP ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಹಾಗಾದರೆ ಮಾರುಕಟ್ಟೆಗೆ ಲಗ್ಗೆ ಇಡುವ ಲಾವಾ ಬೋಲ್ಡ್ N2 5G ಮೊಬೈಲ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಶೀಘ್ರದಲ್ಲೇ ಭಾರತದಲ್ಲಿ Realme P4R 5G ಸ್ಮಾರ್ಟ್‌ಫೋನ್ ಬಿಡುಗಡೆ! ವೇಗದ ಪ್ರೊಸೆಸರ್ ಖಚಿತ
ಲಾವಾ ಕಂಪನಿಯ ಲಾವಾ ಬೋಲ್ಡ್ N2 5G ಮೊಬೈಲ್ ಇಂದು (ಜೂನ್ 3 ರಂದು) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಕುರಿತು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ಲೈವ್ ಮಾಡಲಾಗಿದೆ. ಅಲ್ಲದೇ ಲಾಂಚ್ ಬಳಿಕ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ದೇಶದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಫೋನ್ ಬ್ಲೂ ಕಲರ್ ಆಯ್ಕೆಯಲ್ಲಿ ಎಂಟ್ರಿ ನೀಡುವ ಸಾಧ್ಯತೆಗಳು ಇವೆ.
ಲಾವಾ ಬೋಲ್ಡ್ N2 5G ಮೊಬೈಲ್ ಬ್ಲೂ ಕಲರ್ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವುದು ಬಹುತೇಕ ಪಕ್ಕಾ ಎಂದು ಹೇಳಲಾಗಿದೆ. ಹಾಗೆಯೇ ಈ ಮೊಬೈಲ್ ಹಿಂಭಾಗದಲ್ಲಿ 13MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಇರಲಿದ್ದು ಅದರ ಜೊತೆಗೆ LED ಫ್ಲ್ಯಾಷ್ ಸೌಲಭ್ಯ ಸಹ ಪಡೆದಿರುವ ನಿರೀಕ್ಷೆಯಿದೆ. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಈ ಮೊಬೈಲ್ Unisoc 9863A ಚಿಪ್‌ಸೆಟ್ ಪ್ರೊಸೆಸರ್ ಹೊಂದಿರುವ ನಿರೀಕ್ಷೆಗಳು ಇವೆ.
ಲಾವಾ ಬೋಲ್ಡ್ N2 5G ಎಂಟ್ರಿ ಲೆವೆಲ್ ಮಾದರಿಯ ಸ್ಮಾರ್ಟ್‌ಫೋನ್ ಆಗಿರಲಿದ್ದು ಇದು 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆಯಬಹುದು. ಹಾಗೆಯೇ ಈ ಸ್ಮಾರ್ಟ್‌ಫೋನ್ 18W ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆಯುವ ಸಾಧ್ಯತೆ ಇದೆ. ಟೀಸರ್‌ನಿಂದ ತಿಳಿದಂತೆ ಈ ಫೋನ್‌ನ ಬಲಭಾಗದಲ್ಲಿ ಪವರ್ ಬಟನ್ ಮತ್ತು ವಾಲ್ಯೂಮ್ ಕಂಟ್ರೋಲ್‌ಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೇ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5mm ಆಡಿಯೊ ಜ್ಯಾಕ್ ಮತ್ತು ಸ್ಪೀಕರ್ ಗ್ರಿಲ್ ಅನ್ನು ಫೋನಿನ ಕೆಳಭಾಗದಲ್ಲಿ ನೀಡಲಾಗಿದೆ.