6,000mAh ಬ್ಯಾಟರಿ ಇರುವ Lava Bold N2 ಮೊಬೈಲ್ ಈಗ ಸಸ್ತಾ ಬೆಲೆಯಲ್ಲಿ ಲಭ್ಯ!
ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ
ಲಾವಾದ ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದೆ
ಲಾವಾ ಕಂಪನಿಯ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಪ್ರೊಸೆಸರ್ ಹೊಂದಿದೆ
ಲಾವಾ ಕಂಪನಿಯ Lava Bold N2 ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಮಾರುಕಟ್ಟೆಯಲ್ಲಿ ಅಬ್ಬರಿಸಲು ಬರ್ತಿದೆ Vivo S2 ಮೊಬೈಲ್! 7,000mAh ಸಾಮರ್ಥ್ಯದ ಬ್ಯಾಟರಿ
Lava Bold N2 ಬೆಲೆಯಲ್ಲಿ ಸಖತ್ ಇಳಿಕೆ
ಅಗ್ಗದ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ಲಾವಾ ಬೋಲ್ಡ್ N2 5G ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಲಭ್ಯ.

ಲಾವಾ ಬೋಲ್ಡ್ N2 5G ಮೊಬೈಲ್ ಫೀಚರ್ಸ್
ಲಾವಾ ಬೋಲ್ಡ್ N2 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಲಾವಾ ಬೋಲ್ಡ್ N2 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile