ನಾಳೆ Lava Bold N2 5G ಮೊಬೈಲ್ ಮಾರಾಟ ಪ್ರಾರಂಭ; ಅಗ್ಗದ ಬೆಲೆಗೆ ಲಭ್ಯ
ನಾಳೆ ಲಾವಾ ಬೋಲ್ಡ್ N2 5G ಫೋನ್ ಮಾರಾಟ ಶುರು
ಲಾವಾ ಬೋಲ್ಡ್ N2 ಫೋನ್ 5MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ
ಈ ಮೊಬೈಲ್ ಆಕ್ಟಾ ಕೋರ್ ಯುನಿಸಾಕ್ T8200 ಪ್ರೊಸೆಸರ್ ಪಡೆದಿದೆ
ಲಾವಾ ಕಂಪನಿಯು ನೂತನವಾಗಿ ಪರಿಚಯಿಸಿರುವ Lava Bold N2 5G ಸ್ಮಾರ್ಟ್‌ಫೋನ್ ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಮೊಬೈಲ್ ನಾಳೆ (ಜೂನ್ 9 ರಂದು) ಮಾರಾಟ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಮೊಬೈಲ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೇ ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನ್ ಸೇಲ್ ಮಾಹಿತಿ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಶೀಘ್ರದಲ್ಲೇ ಭಾರತದಲ್ಲಿ Realme P4R 5G ಸ್ಮಾರ್ಟ್‌ಫೋನ್ ಬಿಡುಗಡೆ! ವೇಗದ ಪ್ರೊಸೆಸರ್ ಖಚಿತ
Lava Bold N2 5G ಫೋನ್ ಸೇಲ್ ಡಿಟೇಲ್ಸ್
ಇತ್ತೀಚಿಗೆ ಬಿಡುಗಡೆ ಲಾವಾ ಕಂಪನಿಯ ಲಾವಾ ಬೋಲ್ಡ್ N2 5G ಮೊಬೈಲ್ ಸಿಂಗಲ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ನಾಳೆ (ಜೂನ್ 9 ರಂದು) ಅಮೆಜಾನ್ ಇ ಕಾಮರ್ಸ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್ 12,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಸೇಲ್ ದಿನದಂದು ಅಮೆಜಾನ್‌ನಲ್ಲಿ ಆರಂಭಿಕ ಕೊಡುಗೆಯಾಗಿ 11,999 ರೂ.ಗಳಿಗೆ ಲಭ್ಯ.

ಲಾವಾ ಬೋಲ್ಡ್ N2 5G ಮೊಬೈಲ್ ಫೀಚರ್ಸ್ ಹೀಗಿವೆ
ಲಾವಾ ಬೋಲ್ಡ್ N2 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಲಾವಾ ಬೋಲ್ಡ್ N2 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ. ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 815 ನಿಮಿಷಗಳ YouTube ಪ್ಲೇಬ್ಯಾಕ್ ಮತ್ತು 743 ನಿಮಿಷಗಳ ಸ್ಕ್ರೀನ್-ಆನ್ ಟೈಮ್ ನೀಡುತ್ತದೆ ಎಂದು ಹೇಳಲಾಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
