ಕಡಿಮೆ ಬೆಲೆಯ Lava Bold N2 ಮೊಬೈಲ್‌ಗೆ ಅಮೆಜಾನ್‌ನಲ್ಲಿ ಭಾರೀ ರಿಯಾಯಿತಿ!

HIGHLIGHTS

ಅಮೆಜಾನ್‌ ತಾಣದಲ್ಲಿ ಲಾವಾ ಬೋಲ್ಡ್ N2 5G ಫೋನಿಗೆ ಉತ್ತಮ ಆಫರ್‌

ಲಾವಾ ಬೋಲ್ಡ್ N2 5G ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ

ಲಾವಾದ ಈ ಫೋನ್‌ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಕಲರ್‌ನಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಲಾವಾ ಕಂಪನಿಯ Lava Bold N2 ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಆಕ್ಟಾ ಕೋರ್ Unisoc SC9863A ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಲಾವಾ ಬೋಲ್ಡ್ N2 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ಬೆಲೆಯಲ್ಲಿ ಲಭ್ಯವಿರುವ Airtel ಸಂಸ್ಥೆಯ ಈ ಯೋಜನೆಯಲ್ಲಿ 25GB ಡೇಟಾ ಸೌಲಭ್ಯ!

Lava Bold N2 ಫೋನಿಗೆ ಭರ್ಜರಿ ಆಫರ್‌

ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಲಾವಾ ಬೋಲ್ಡ್ N2 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 12,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 9,699 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಇಂಡಸ್ ಬ್ಲ್ಯಾಕ್ ಮತ್ತು ಸಿಯಾಚಿನ್ ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಲಾವಾ ಬೋಲ್ಡ್ N2 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಲಾವಾ ಬೋಲ್ಡ್‌ N2 ಮೊಬೈಲ್‌ನ ಫೀಚರ್ಸ್‌

ಲಾವಾ ಬೋಲ್ಡ್‌ N2 ಮೊಬೈಲ್‌ 90Hz ರಿಫ್ರೆಶ್ ರೇಟ್‌ ಸೌಲಭ್ಯ ಒಳಗೊಂಡ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದು ವಾಟರ್‌ ಡ್ರಾಪ್ ಶೈಲಿಯ ನಾಚ್ ಹೊಂದಿದೆ. ಅಂದಹಾಗೆ ಈ ಫೋನ್‌ Unisoc SC9863A ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು ಇದರೊಂದಿಗೆ 4GB RAM + 64GB ವರೆಗೆ ಆನ್‌ಬೋರ್ಡ್ ಸ್ಟೋರೇಜ್‌ ಆಯ್ಕೆ ಪಡೆದಿದ್ದು ಇದಕ್ಕೆ ಪೂರಕವಾಗಿ Android 15 Go ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ ಸುರಕ್ಷತೆಗಾಗಿ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ. ಈ ಫೋನ್‌ 4GB RAM + 64 GB ಸ್ಟೋರೇಜ್‌ನ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಇನ್ನು ಲಾವಾ ಬೋಲ್ಡ್‌ N2 ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರುವ ಜೊತೆಗೆ ಸಪೋರ್ಟಿವ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಹಿಂಭಾಗದಲ್ಲಿ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗೆಯೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್‌ ಸೌಲಭ್ಯ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :