Lava Bold N2 5G
ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಅವುಗಳ ಪೈಕಿ ಪ್ರೀಮಿಯಂ ವಿಭಾಗದ Lava Bold N2 ಮೊಬೈಲ್ ಸಹ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 6,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಲಾವಾ ಬೋಲ್ಡ್ N2 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
Also Read : ಜನಪ್ರಿಯ Vivo X300 FE ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ! ಹೊಸ ಬೆಲೆ ನೋಡಿ
ಅಗ್ಗದ ಬೆಲೆಯ ಮೂಲಕ ಗ್ರಾಹಕರ ಗಮನ ಸೆಳೆದಿರುವ ಲಾವಾ ಮೊಬೈಲ್ ಕಂಪನಿಯ ಲಾವಾ ಬೋಲ್ಡ್ N2 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಗಮನಾರ್ಹ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 9,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 9,099 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಅಂದಹಾಗೆ ಈ ಫೋನ್ ರೀಗಲ್ ಗೋಲ್ಡ್ ಮತ್ತು ಬಿಲಿಯನೇರ್ ಬ್ಲೂ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಲಾವಾ ಬೋಲ್ಡ್ N2 5G ಮೊಬೈಲ್ 6.75 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಯುನಿಸಾಕ್ T8200 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಲಾವಾ ಬೋಲ್ಡ್ N2 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.
Disclosure: This Article Contains Affiliate Links