ಲಾವಾ ಮೊಬೈಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಇಂದು (ಮಾರ್ಚ್ 31 ರಂದು) ಹೊಸದಾಗಿ Lava Bold N2 Pro ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ Unisoc T7250 ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ 4G ಬೆಂಬಲಿತ ಈ ಮೊಬೈಲ್ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಆಕರ್ಷಕ ಅರೋರಾ ಗೋಲ್ಡ್ ಮತ್ತು ಎಕ್ಲಿಪ್ಸ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದೆ. ಹಾಗಾದರೆ ಲಾವಾ ಬೋಲ್ಡ್ N2 ಪ್ರೊ ಫೋನಿನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Best ChatGPT Baby Photo Editing Prompts: ಈ 20+ ಟ್ರೆಂಡಿಂಗ್ ಪ್ರಾಂಪ್ಟ್ ಬಳಸಿ ಬೆಸ್ಟ್ ಫೋಟೋ ರಚಿಸಿ
ದೇಶಿಯ ಮೊಬೈಲ್ ಮಾರುಕಟ್ಟೆ ಪ್ರವೇಶಿಸಿರುವ ಲಾವಾ ಬೋಲ್ಡ್ N2 ಪ್ರೊ ಮೊಬೈಲ್ ಎಂಟ್ರಿ ಲೆವೆಲ್ ಮಾದರಿಯ ಫೋನ್ ಆಗಿದ್ದು, ಅಗ್ಗದ ಪ್ರೈಸ್‌ಟ್ಯಾಗ್ ಹೊಂದಿದೆ. ನೂತನ ಲಾವಾ ಬೋಲ್ಡ್ N2 ಪ್ರೊ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 7,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಅರೋರಾ ಗೋಲ್ಡ್ ಮತ್ತು ಎಕ್ಲಿಪ್ಸ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 6 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟಕ್ಕೆ ಬರಲಿದೆ.
ಹೊಸ ಲಾವಾ ಬೋಲ್ಡ್ N2 ಪ್ರೊ ಮೊಬೈಲ್ 6.75 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರೊಂದಿಗೆ ಆಂಡ್ರಾಯ್ಡ್ 15 ಓಎಸ್ ಜೊತೆಗೆ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ ಈ ಮೊಬೈಲ್ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಲಾವಾ ಬೋಲ್ಡ್ N2 ಪ್ರೊ ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 50MP ಮತ್ತು 50MP ಸೆನ್ಸಾರ್ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.