ಫ್ಲಿಪ್‌ಕಾರ್ಟ್‌ನಲ್ಲಿ Lava Bold N2 Pro ಮೊಬೈಲ್‌ ಖರೀದಿಗೆ ಲಭ್ಯ! ಬೆಲೆ 7,999 ರೂ.ಗಳು

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಲಾವಾ ಬೋಲ್ಡ್‌ N2 ಪ್ರೊ ಮೊಬೈಲ್‌ ಸೇಲ್‌ ಶುರು

ಲಾವಾ ಬೋಲ್ಡ್‌ N2 ಪ್ರೊ ಸ್ಮಾರ್ಟ್‌ಫೋನ್‌ ಎರಡು ಕಲರ್‌ ಆಯ್ಕೆ ಪಡೆದಿದೆ

ಈ ಹೊಸ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ

ಫ್ಲಿಪ್‌ಕಾರ್ಟ್‌ನಲ್ಲಿ Lava Bold N2 Pro ಮೊಬೈಲ್‌ ಖರೀದಿಗೆ ಲಭ್ಯ! ಬೆಲೆ 7,999 ರೂ.ಗಳು

ಲಾವಾ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಬಿಡುಗಡೆ ಮಾಡಿರುವ Lava Bold N2 Pro ಸ್ಮಾರ್ಟ್‌ಫೋನ್‌ ಇಂದು (ಏಪ್ರಿಲ್‌ 6 ರಂದು) ಸೇಲ್‌ ಪ್ರಾರಮಭ ಮಾಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ Unisoc T7250 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4G ಬೆಂಬಲಿತ ಈ ಮೊಬೈಲ್‌ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಅರೋರಾ ಗೋಲ್ಡ್ ಮತ್ತು ಎಕ್ಲಿಪ್ಸ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದೆ. ಹಾಗಾದರೆ ಲಾವಾ ಬೋಲ್ಡ್‌ N2 ಪ್ರೊ ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಸ್ಲಿಮ್‌ ಡಿಸೈನ್‌ ಹೊಂದಿರುವ iQOO Z10R ಮೊಬೈಲ್‌ ಖರೀದಿಗೆ ಇದು ಬೆಸ್ಟ್‌ ಟೈಮ್‌!

ಲಾವಾ ಬೋಲ್ಡ್‌ N2 ಪ್ರೊ ಫೋನ್‌ ಸೇಲ್‌ ಪ್ರಾರಂಭ

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ಲಾವಾ ಬೋಲ್ಡ್‌ N2 ಪ್ರೊ ಮೊಬೈಲ್‌ ಎಂಟ್ರಿ ಲೆವೆಲ್‌ ಮಾದರಿಯ ಫೋನ್‌ ಆಗಿದ್ದು, ಅಗ್ಗದ ಪ್ರೈಸ್‌ಟ್ಯಾಗ್‌ ಹೊಂದಿದೆ. ನೂತನ ಲಾವಾ ಬೋಲ್ಡ್‌ N2 ಪ್ರೊ ಮೊಬೈಲ್‌ ಇಂದು (ಏಪ್ರಿಲ್‌ 6 ರಂದು) ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಶುರು ಮಾಡಿದೆ. ಈ ಫೋನಿನ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 7,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಅರೋರಾ ಗೋಲ್ಡ್ ಮತ್ತು ಎಕ್ಲಿಪ್ಸ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Lava Bold N2 Pro

ಲಾವಾ ಬೋಲ್ಡ್‌ N2 ಪ್ರೊ ಫೀಚರ್ಸ್‌ ಹೀಗಿವೆ

ಲಾವಾ ಬೋಲ್ಡ್‌ N2 ಪ್ರೊ ಮೊಬೈಲ್‌ 6.75 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರೊಂದಿಗೆ ಆಂಡ್ರಾಯ್ಡ್ 15 ಓಎಸ್‌ ಜೊತೆಗೆ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ ಈ ಮೊಬೈಲ್‌ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಹಾಗೆಯೇ ಲಾವಾ ಬೋಲ್ಡ್‌ N2 ಪ್ರೊ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 50MP ಮತ್ತು 50MP ಸೆನ್ಸಾರ್‌ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo