ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ Lava Bold N4 Lite ಮೊಬೈಲ್! ನಿರೀಕ್ಷಿತ ಫೀಚರ್ಸ್ ಗಮನಿಸಿ
ಆಗಷ್ಟ್ 27 ರಂದು ಲಾವಾ ಬೋಲ್ಡ್ N4 ಲೈಟ್ ಫೋನ್ ಲಾಂಚ್
ಲಾವಾ ಬೋಲ್ಡ್ N4 ಲೈಟ್ ಫೋನ್ ಡ್ಯುಯಲ್ ಕ್ಯಾಮೆರಾ ಹೊಂದಿರಲಿದೆ
ಈ ಸ್ಮಾರ್ಟ್‌ಫೋನ್ Unisoc SC9863A ಚಿಪ್‌ಸೆಟ್ ಪ್ರೊಸೆಸರ್ ಪಡೆದಿರಲಿದೆ
ಲಾವಾ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿದ್ದ ಲಾವಾ ಬೋಲ್ಡ್ N2 ಲೈಟ್ ಫೋನ್ ಅಗ್ಗದ ಬೆಲೆಯ ಮೂಲಕ ಗಮನ ಸೆಳೆದಿದೆ. ಇದರ ಮುಂದಿನ ಭಾಗವಾಗಿ ಕಂಪನಿಯು ಇದೀಗ Lava Bold N4 Lite ಸ್ಮಾರ್ಟ್‌ಫೋನ್ ಲಾಂಚ್ ಮಾಡಲು ಸಜ್ಜಾಗಿದ್ದು, ಇದೇ ಆಗಷ್ಟ್ 27 ರಂದು ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಬಿಡುಗಡೆ ಕುರಿತು ಈಗಾಗಲೇ ಅಮೆಜಾನ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ನೂತನವಾಗಿ ಲಗ್ಗೆ ಇಡಲಿರುವ ಈ ಮೊಬೈಲ್ Unisoc SC9863A ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಆಗಿದೆ. ಹಾಗಾದರೆ ಲಾವಾ ಬೋಲ್ಡ್ N4 ಲೈಟ್ ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Realme P4 Lite 5G ಮೊಬೈಲ್ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!
ಶೀಘ್ರದಲ್ಲೇ Lava Bold N4 Lite ಫೋನ್ ಲಾಂಚ್
ಲಾವಾ ಕಂಪನಿಯು ತನ್ನ ಹೊಸ ಲಾವಾ ಬೋಲ್ಡ್ N4 ಲೈಟ್ ಮೊಬೈಲ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಫೋನ್ ಇದೇ ಆಗಷ್ಟ್ 27 ರಂದು ಮಧ್ಯಾಹ್ನ 12 ಗಂಟೆಗೆ ಲಾಂಚ್ ಮಾಡಲಿದೆ. ಈಗಾಗಲೇ ಅಮೆಜಾನ್‌ನಲ್ಲಿ ಈ ಫೋನ್‌ಗಳಿಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ. ಇನ್ನು ಈ ಫೋನ್ ಆಕರ್ಷಕ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ. ಇದು ಅಗ್ಗದ ಪ್ರೈಸ್‌ಟ್ಯಾಗ್ ಒಳಗೊಂಡಿರುವ ಸಾಧ್ಯತೆಗಳು ಇವೆ.

ಲಾವಾ ಬೋಲ್ಡ್ N4 ಲೈಟ್ ನಿರೀಕ್ಷಿತ ಫೀಚರ್ಸ್ ಮಾಹಿತಿ
ಲಾವಾ ಬೋಲ್ಡ್ N4 ಲೈಟ್ ಮೊಬೈಲ್ 6.75 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಸ್ಕ್ರೀನ್ 90Hz ರಿಫ್ರೆಶ್ ರೇಟ್ ಜೊತೆಗೆ ಅಗತ್ಯ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು Unisoc SC9863A ಚಿಪ್‌ಸೆಟ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ 15 ಗೋ ಸಪೋರ್ಟ್ ಪಡೆದಿರುವ ಸಾಧ್ಯತೆಗಳು ಇವೆ.
ಲಾವಾ ಬೋಲ್ಡ್ N4 ಲೈಟ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಬಲ ಪಡೆದಿರಲಿದೆ. ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಕ್ಯಾಮೆರಾ ಒದಗಿಸಲಾಗುವ ಕ್ಯಾಮೆರಾ ಸೆನ್ಸಾರ್ ಬಗ್ಗೆ ಕಂಪನಿಯು ಮಾಹಿತಿ ಹೊರಹಾಕಿಲ್ಲ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಖಚಿತ ಆಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
