ನಾಳೆ Lava Bold N4 Lite ಫೋನ್ ಖರೀದಿಗೆ ಲಭ್ಯ; ಆಫರ್ ಬೆಲೆ ಹಾಗೂ ಫೀಚರ್ಸ್
ನಾಳೆ (ಸೆಪ್ಟೆಂಬರ್ 3 ರಿಂದ) ಲಾವಾ ಬೋಲ್ಡ್ N4 ಲೈಟ್ ಮೊಬೈಲ್ ಸೇಲ್
ಲಾವಾ ಬೋಲ್ಡ್ N4 ಲೈಟ್ ಮೊಬೈಲ್ 5,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ಲಾವಾ ಬೋಲ್ಡ್ N4 ಲೈಟ್ ಫೋನ್ Unisoc SC9863A ಪ್ರೊಸೆಸರ್ ಹೊಂದಿದೆ
ಲಾವಾ ಕಂಪನಿಯ ಇತ್ತೀಚಿನ Lava Bold N4 Lite ಮೊಬೈಲ್ ಕಡಿಮೆ ಬೆಲೆ ಹಾಗೂ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಸೆಪ್ಟೆಂಬರ್ 3 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಸೇಲ್ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ Unisoc SC9863A ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 13MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಎಂಪೈರ್ ಗೋಲ್ಡ್ ಮತ್ತು ಘೋಸ್ಟ್ ಸಿಲ್ವರ್ ಕಲರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಲಾವಾ ಬೋಲ್ಡ್ N4 ಲೈಟ್ ಸ್ಮಾರ್ಟ್‌ಫೋನ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Jio ಟೆಲಿಕಾಂನ 629 ರೂ.ಗಳ ಪ್ಲಾನಿನಲ್ಲಿ ಸಖತ್ ಪ್ರಯೋಜನ! ಓಟಿಟಿ, ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ
ನಾಳೆ Lava Bold N4 Lite ಸೇಲ್
ಇತ್ತೀಚಿಗೆ ಅಗ್ಗದ ದರದಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಲಾವಾ ಬೋಲ್ಡ್ N4 ಲೈಟ್ ಮೊಬೈಲ್ ನಾಳೆ (ಸೆಪ್ಟೆಂಬರ್ 3 ರಿಂದ) ಮಧ್ಯಾಹ್ನ 12 ಗಂಟೆಗೆ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಶುರು ಮಾಡಲಿದೆ. ಲಾವಾ ಬೋಲ್ಡ್ N4 ಲೈಟ್ ಮೊಬೈಲ್ 3GB RAM + 32GB ಸ್ಟೋರೇಜ್ ಮಾದರಿಯ ಬೆಲೆ 8,099 ರೂ.ಗಳು ಆಗಿದೆ. ಆದರೆ ಆರಂಭಿಕ ಕೊಡುಗೆಯಾಗಿ ಸೇಲ್‌ನಲ್ಲಿ ಈ ಫೋನ್ 7,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಈ ಫೋನ್ ಮಾರಾಟಕ್ಕೆ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎಂಪೈರ್ ಗೋಲ್ಡ್ ಮತ್ತು ಘೋಸ್ಟ್ ಸಿಲ್ವರ್ ಕಲರ್ ಆಯ್ಕೆ ಪಡೆದುಕೊಂಡಿದೆ.

ಲಾವಾ ಬೋಲ್ಡ್ N4 ಲೈಟ್ ಫೀಚರ್ಸ್ ಹೀಗಿವೆ
ಲಾವಾ ಬೋಲ್ಡ್ N4 ಲೈಟ್ ಮೊಬೈಲ್ 6.75 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಸ್ಕ್ರೀನ್ 90Hz ರಿಫ್ರೆಶ್ ರೇಟ್ ಜೊತೆಗೆ ಅಗತ್ಯ ಬ್ರೈಟ್‌ನೆಸ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು Unisoc SC9863A ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 16 ಗೋ ಆವೃತ್ತಿ ಸಪೋರ್ಟ್ ಪಡೆದಿದೆ.
ಲಾವಾ ಬೋಲ್ಡ್ N4 ಲೈಟ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ನಲ್ಲಿ ಸಾಮರ್ಥ್ಯದಲ್ಲಿ ಇದ್ದು, ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಬಲ ಪಡೆದಿದೆ. ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಜೊತೆಗೆ 10W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
