Lava Bold N4 Pro 5G
ಲಾವಾ ಮೊಬೈಲ್ ಕಂಪನಿಯ ನೂತನ Lava Bold N4 Pro 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಲಾವಾ ಬೋಲ್ಡ್ N4 ಪ್ರೊ 5G ಫೋನ್ ನಾಳೆ (ಸಪ್ಟೆಂಬರ್ 26 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ Unisoc T8200 5G ಚಿಪ್‌ಸೆಟ್ ಸೌಲಭ್ಯದ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೇ ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ
ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹೊಸ ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್ ನಾಳೆ (ಸಪ್ಟೆಂಬರ್ 26 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 6GB + 128GB ಸ್ಟೋರೇಜ್ ವೇರಿಯಂಟ್ 13,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ಲಾವಾ ಬೋಲ್ಡ್ N4 ಪ್ರೊ 5G ಸ್ಮಾರ್ಟ್‌ಫೋನ್ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ ತನ್ನ ವರ್ಗದಲ್ಲೇ ಉತ್ತಮ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ Unisoc T8200 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿದೆ.
ಹಾಗೆಯೇ ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.