ಭಾರತದಲ್ಲಿ Lava Bold N4 Pro 5G ಬಿಡುಗಡೆ! ಬಿಗ್ ಬ್ಯಾಟರಿ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೌಲಭ್ಯ

HIGHLIGHTS

ಲಾವಾ ಬೋಲ್ಡ್ N4 ಪ್ರೊ ಫೋನ್‌ 6,000mAh ಬ್ಯಾಟರಿ ಹೊಂದಿದೆ

ಲಾವಾ ಬೋಲ್ಡ್ N4 ಪ್ರೊ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ

ಲಾವಾ ಬೋಲ್ಡ್ N4 ಪ್ರೊ ಈ ಮೊಬೈಲ್‌ ಎರಡು ಆಕರ್ಷಕ ಕಲರ್‌ ಆಯ್ಕೆ ಒಳಗೊಂಡಿದೆ

ಭಾರತದಲ್ಲಿ Lava Bold N4 Pro 5G ಬಿಡುಗಡೆ! ಬಿಗ್ ಬ್ಯಾಟರಿ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೌಲಭ್ಯ

ಲಾವಾ ಮೊಬೈಲ್‌ ಸಂಸ್ಥೆಯು ಹೊಸದಾಗಿ Lava Bold N4 Pro 5G ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ Unisoc T8200 5G ಚಿಪ್‌ಸೆಟ್‌ ಪ್ರೊಸೆಸರ್‌ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಹಾಗೂ 6,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ಲಾವಾ ಬೋಲ್ಡ್ N4 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio vs Airtel Rs 3599 ರೂ.ಗಳ ಪ್ಲಾನ್: 365 ದಿನಗಳ ವ್ಯಾಲಿಡಿಟಿಗೆ ಯಾವ ಪ್ಲಾನ್‌ ಅತ್ಯುತ್ತಮ?

Lava Bold N4 Pro 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಲಾವಾ ಮೊಬೈಲ್‌ ಸಂಸ್ಥೆಯ ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 6GB + 128GB ಸ್ಟೋರೇಜ್‌ ವೇರಿಯಂಟ್‌ 13,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಇದೇ ಸಪ್ಟೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ಅಮೆಜಾನ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಿರುತ್ತದೆ.

lava bold n4 pro specs

ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್‌ ಫೀಚರ್ಸ್‌

ಲಾವಾ ಬೋಲ್ಡ್ N4 ಪ್ರೊ 5G ಸ್ಮಾರ್ಟ್‌ಫೋನ್‌ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ ತನ್ನ ವರ್ಗದಲ್ಲೇ ಉತ್ತಮ ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ Unisoc T8200 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಪರೇಟಿಂಗ್ ಸಿಸ್ಟಮ್‌ ಸಪೋರ್ಟ್ ಪಡೆದಿದೆ.

ಹಾಗೆಯೇ ಲಾವಾ ಬೋಲ್ಡ್ N4 ಪ್ರೊ 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile