Lava Play Max launched in India-
ಭಾರತದ ಸ್ವದೇಶಿ ಬ್ರಾಂಡ್ ಲಾವಾ (Lava) ಇಂದು ಸದ್ದಿಲ್ಲದೇ Lava Play Max ಸ್ಮಾರ್ಟ್ಫೋನ್ ವಿಶೇಷವಾಗಿ ಬಜೆಟ್ ಬೆಲೆಯಲ್ಲಿ ಗೇಮರ್‌ಗಳಿಗಾಗಿ ಬಿಡುಗಡೆಗೊಳಿಸಿದೆ. ಸ್ಮಾರ್ಟ್ಫೋನ್ ಇದನ್ನು ಕೈಗೆಟಕುವ ಬೆಲೆಗೆ ಒಂದು ಅತ್ಯುತ್ತಮ ಮತ್ತು ಡಿಸೆಂಟ್ ಗೇಮಿಂಗ್ ಸ್ಮಾರ್ಟ್ಫೋನ್ ಹುಡುಕುತ್ತಿರುವವರನ್ನು ಗುರಿಯಾಗಿಸಿಕೊಂಡು ಪರಿಚಯಿಸಲಾಗಿದೆ. ಈ ಸ್ಮಾರ್ಟ್ಫೋನ್ ಅನೇಕ ಇಂಟ್ರೆಸ್ಟಿಂಗ್ ಫೀಚರ್ಗಳೊಂದಿಗೆ ಪ್ಯಾಕ್ ಮಾಡಲಾಗಿದೆ. ಸ್ಮಾರ್ಟ್ಫೋನ್ ಬರೋಬ್ಬರಿ 5000mAh ಬ್ಯಾಟರಿ ಮತ್ತು 4K ವಿಡಿಯೋ ರೆಕಾರ್ಡಿಂಗ್ ಫೀಚರ್ಗಳೊಂದಿಗೆ ಪವರ್ಫುಲ್ MediaTek Dimensity 7300 ಚಿಪ್‌ನೊಂದಿಗೆ ಬರುತ್ತದೆ. ಹಾಗಾದ್ರೆ ಇದರ ಸಂಪೂರ್ಣ ಫೀಚರ್ ಮತ್ತು ಬೆಲೆಯ ಮಾಹಿತಿಯನ್ನು ಈ ಕೆಳಗೆ ತಿಳಿಯಿರಿ.
Also Read: ಅಮೆಜಾನ್‌ನಲ್ಲಿ ಇಂದು ಸೋನಿಯ ಈ Dolby Digital Soundbar ಮೇಲೆ ಭರ್ಜರಿ ಡಿಸ್ಕೌಂಟ್‌ಗಳು ಲಭ್ಯ!
ಈ ಲಾವಾ ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಎರಡು ರೂಪಾಂತದರಲ್ಲಿ ಅಮೆಜಾನ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 6GB RAM (+6GB RAM) ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹12,999 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM (+8GB RAM) ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹14,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಅಲ್ಲದೆ ಸ್ಮಾರ್ಟ್ಫೋನ್ ಹೆಚ್ಚುವರಿಯಾಗಿ ಮತ್ತು RAM ಸಹ ಹೊಂದಿರುತ್ತದೆ. ಈ Lava Play Max ಸ್ಮಾರ್ಟ್ಫೋನ್ ಇದೆ ತಿಂಗಳಿಂದ ಅಮೆಜಾನ್ ಮತ್ತು ಒಪ್ಪೋವಿನ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
Lava Play Max ಸ್ಮಾರ್ಟ್ಫೋನ್ 6.72 ಇಂಚಿನ HD+ (1080×2436 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ. ಸ್ಮಾರ್ಟ್ಫೋನ್ ಸ್ಕ್ರೀನ್ ಪ್ರೊಟೆಕ್ಷನ್‌ಗಾಗಿ ಗೊರಿಲ್ಲಾ ಗ್ಲಾಸ್ ಹೊಂದಿದೆ. Lava Play Max ಫೋನ್ ಕಾಮೆರದಲ್ಲಿ 50MP ಪ್ರೈಮರಿ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
Lava Play Max ಫೋನ್ MediaTek Dimensity 7300 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಜೊತೆಗೆ ColorOS 15.0.2 ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, GPS/GPS, GLONASS, BDS, Galileo ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Lava Play Max ಸ್ಮಾರ್ಟ್ಫೋನ್ 5000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.