Lava Virat Curve launched with stunning design and features
ಲಾವಾ ಮೊಬೈಲ್ ಸಂಸ್ಥೆಯು ಹೊಸದಾಗಿ Lava Virat Curve 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 3D ಕರ್ವ್ಡ್ AMOLED ಡಿಸ್‌ಪ್ಲೇ ಹಾಗೂ 6,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಎಲ್ಲೋರಾ ಸ್ಲೇಟ್, ಹೆರಿಟೇಜ್ ಇಂಡಿಗೋ ಮತ್ತು ಮಕ್ರಾನಾ ಐವರಿ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ಲಾವಾ ವಿರಾಟ್ ಕರ್ವ್ 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ 625 ರೂ.ಗಳ ಪ್ಲಾನ್‌ನಲ್ಲಿ ಜಬರ್ದಸ್ತ್ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ
ಲಾವಾ ಮೊಬೈಲ್ ಸಂಸ್ಥೆಯ ಲಾವಾ ವಿರಾಟ್ ಕರ್ವ್ 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 6GB RAM + 128GB ಸ್ಟೋರೇಜ್ ವೇರಿಯಂಟ್ 23,999 ರೂ.ಗಳ ಬೆಲೆಯನ್ನು ಹೊಂದಿದೆ. ಆದರೆ ಲಭ್ಯವಿರುವ ಆಫರ್ ಮೂಲಕ 19,999 ರೂ.ಗಳಿಗೆ ಪಡೆಯಬಹುದು. ಈ ಫೋನ್ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇದೇ ಸಪ್ಟೆಂಬರ್ 28 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ಲಾವಾ ವಿರಾಟ್ ಕರ್ವ್ 5G ಸ್ಮಾರ್ಟ್‌ಫೋನ್ 6.67 ಇಂಚಿನ Full-HD+ 3D ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,100 ನಿಟ್ಸ್ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್ 1,080×2,400 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿದೆ.
ಹಾಗೆಯೇ ಲಾವಾ ವಿರಾಟ್ ಕರ್ವ್ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 45W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.