don't miss the Lava Virat Curve first day big deal sale starts tomorrow
ಲಾವಾ ಮೊಬೈಲ್ ಕಂಪನಿಯ ನೂತನ Lava Virat Curve 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಲಾವಾ ವಿರಾಟ್ ಕರ್ವ್ 5G ಫೋನ್ ಇಂದು (ಸಪ್ಟೆಂಬರ್ 28 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ Unisoc T8200 5G ಚಿಪ್‌ಸೆಟ್ ಸೌಲಭ್ಯದ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೇ ಲಾವಾ ವಿರಾಟ್ ಕರ್ವ್ 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ
ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹೊಸ ಲಾವಾ ವಿರಾಟ್ ಕರ್ವ್ 5G ಮೊಬೈಲ್ ಇಂದು (ಸಪ್ಟೆಂಬರ್ 28 ರಂದು) 7PM ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಆರಂಭಿಕ ಸೇಲ್‌ನಲ್ಲಿ 19,999 ರೂ.ಗಳಿಗೆ ಮಾರಾಟವಾಗಲಿದೆ. ಈ ಫೋನ್ ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ಲಾವಾ ವಿರಾಟ್ ಕರ್ವ್ 5G ಸ್ಮಾರ್ಟ್‌ಫೋನ್ 6.67 ಇಂಚಿನ Full HD+ 3D ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,100 ನಿಟ್ಸ್ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್ 1,080×2,400 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿದೆ.
ಹಾಗೆಯೇ ಲಾವಾ ವಿರಾಟ್ ಕರ್ವ್ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 45W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.