ಹೊಸ Lava Virat Curve ಖರೀದಿಗೆ ಇದುವೇ ಅತ್ಯುತ್ತಮ ಸಮಯ! ಭರ್ಜರಿ ಆಫರ್‌ ಲಭ್ಯ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಲಾವಾ ವಿರಾಟ್ ಕರ್ವ್ ಫೋನಿಗೆ ಆಕರ್ಷಕ ಆಫರ್‌

ಲಾವಾ ವಿರಾಟ್ ಕರ್ವ್ ಮೊಬೈಲ್‌ 6,000mAh ಬ್ಯಾಟರಿ ಸೌಲಭ್ಯ ಹೊಂದಿದೆ

ಲಾವಾ ವಿರಾಟ್ ಕರ್ವ್ ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಬಣ್ಣಗಳಲ್ಲಿ ಲಭ್ಯ

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಲಾವಾ ಕಂಪನಿಯ Lava Virat Curve ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಲಾವಾ ವಿರಾಟ್ ಕರ್ವ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Airtel ಗ್ರಾಹಕರಿಗೆ ಗುಡ್‌ನ್ಯೂಸ್! ಯೂಟ್ಯೂಬ್ ಜೊತೆ ಹೊಸ ಪಾಲುದಾರಿಕೆ; ಆಕರ್ಷಕ ಪ್ರಯೋಜನ

Lava Virat Curve ಈಗ ರಿಯಾಯಿತಿಯಲ್ಲಿ ಲಭ್ಯ

ಗ್ರಾಹಕರ ಸ್ನೇಹಿ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಲಾವಾ ವಿರಾಟ್ ಕರ್ವ್ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 29,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 23,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಮೊನಾಕೊ ಬ್ಲೂ ಮತ್ತು ಒಪ್ಯುಲೆಂಟ್ ಲೈಲಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Lava Virat Curve

ಲಾವಾ ವಿರಾಟ್ ಕರ್ವ್ 5G ಮೊಬೈಲ್‌ ಫೀಚರ್ಸ್‌

ಲಾವಾ ವಿರಾಟ್ ಕರ್ವ್ 5G ಸ್ಮಾರ್ಟ್‌ಫೋನ್‌ 6.67 ಇಂಚಿನ Full-HD+ 3D ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,100 ನಿಟ್ಸ್ ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್‌ 1,080×2,400 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಪರೇಟಿಂಗ್ ಸಿಸ್ಟಮ್‌ ಸಪೋರ್ಟ್ ಪಡೆದಿದೆ.

ಹಾಗೆಯೇ ಲಾವಾ ವಿರಾಟ್ ಕರ್ವ್ 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 45W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :