ಜುಲೈ 24 ರಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Lava Virat V1 5G ಮೊಬೈಲ್‌! ಇಲ್ಲಿದೆ ಮಾಹಿತಿ

HIGHLIGHTS

ಗ್ರ್ಯಾಂಡ್‌ ಎಂಟ್ರಿ ಕೊಡಲು ಲಾವಾ ವಿರಾಟ್‌ V1 5G ಫೋನ್‌ ಸರಣಿ

ಲಾವಾದ ಹೊಸ ಫೋನ್‌ಗಳು 13MP AI ಕ್ಯಾಮೆರಾ ಸೆಟ್‌ಅಪ್‌ ಪಡೆದಿರಲಿದೆ

ಲಾವಾದ ಈ ಎರಡು ಮೊಬೈಲ್‌ಗಳು 6,000mAh ಬ್ಯಾಟರಿ ಪವರ್ ಒಳಗೊಂಡಿರಲಿದೆ

ಜುಲೈ 24 ರಂದು ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Lava Virat V1 5G ಮೊಬೈಲ್‌! ಇಲ್ಲಿದೆ ಮಾಹಿತಿ

ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯ ಮೊಬೈಲ್‌ಗಳಿಂದ ಜನಪ್ರಿಯತೆ ಗಳಿಸಿರುವ ಲಾವಾ ಕಂಪನಿ ಇದೀಗ ತನ್ನ ಹೊಸ Lava Virat V1 5G ಹಾಗೂ Lava Virat V1 ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ವಿಶೇಷವಾಗಿ ಲಾವಾ ವಿರಾಟ್‌ V1 5G ಮಾದರಿಯು UNISOC T8200 ಆಕ್ಟಾ ಕೋರ್ ಚಿಪ್‌ಸೆಟ್‌ ಪ್ರೊಸೆಸರ್ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪವರ್‌ ಅನ್ನು ಪಡೆದಿರುವುದು ಬಹುತೇಕ ಪಕ್ಕಾ ಎನ್ನಲಾಗಿದೆ. ಅಲ್ಲದೇ ಮುಂಬರುವ ಈ ಎರಡು ಮೊಬೈಲ್‌ 13MP AI ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಹಾಗಾದರೆ ಮಾರುಕಟ್ಟೆಗೆ ಬರಲಿರುವ ಲಾವಾ ವಿರಾಟ್‌ V1 ಸರಣಿಯ ಫೋನ್‌ಗಳ ಲಾಂಚ್‌ ಡೇಟ್ ಹಾಗೂ ಇತರೆ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಸಖತ್ ಸ್ಟೈಲಿಶ್‌ ಲುಕ್‌ ಇರುವ Oppo K14x 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

Lava Virat V1 5G ಲಾಂಚ್‌ ಡೇಟ್‌ ಫಿಕ್ಸ್‌

ಲಾವಾ ಕಂಪನಿಯು ತನ್ನ ಹೊಸ ಲಾವಾ ವಿರಾಟ್‌ V1 5G ಮತ್ತು ಲಾವಾ ವಿರಾಟ್‌ V1 ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಕಂಪನಿಯ ಮಾಹಿತಿ ಪ್ರಕಾರ, ಈ ಎರಡೂ ಫೋನ್‌ಗಳು ಜುಲೈ 24ರಂದು ಮಧ್ಯಾಹ್ನ 12 ಗಂಟೆಗೆ ಲಾಂಚ್ ಆಗಲಿವೆ. ಈಗಾಗಲೇ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ಗಳಿಗಾಗಿ ವಿಶೇಷ ಮೈಕ್ರೋಸೈಟ್ ಲೈವ್ ಆಗಿದ್ದು, ಬಿಡುಗಡೆಯ ನಂತರ ಎರಡೂ ಮಾದರಿಗಳು ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಾಗಲಿವೆ ಎಂದು ಕಂಪನಿ ದೃಢಪಡಿಸಿದೆ.

Lava Virat V1 5G and Virat V1

ಲಾವಾ ವಿರಾಟ್‌ V1 5G ಫೋನ್‌ ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಮುಂಬರುವ ಹೊಸ ಲಾವಾ ವಿರಾಟ್‌ V1 5G ಫೋನ್‌ 6.75 ಇಂಚಿನ HD+ ಡಿಸ್ಪ್ಲೇ ಪಡೆದಿರಲಿದ್ದು, ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸಪೋರ್ಟ್‌ನಲ್ಲಿ ಇರಲಿದೆ. ಇನ್ನು ಈ ಫೋನ್‌ ಆಕ್ಟಾ ಕೋರ್ UNISOC T8200 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಹೊಂದಿರಲಿದ್ದು ಇದಕ್ಕೆ ಅನುಗುಣವಾಗಿ 4GB RAM + 64GB ಸ್ಟೋರೇಜ್‌ ಆಯ್ಕೆ ಹೊಂದಿರಲಿದೆ. ಹಾಗೆಯೇ 4GB virtual RAM ಸಪೋರ್ಟ್‌ ಇರಲಿದೆ ಎನ್ನಲಾಗಿದೆ.

ಲಾವಾ ವಿರಾಟ್‌ V1 5G ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರಲಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 13MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿರಲಿದೆ. ಅಲ್ಲದೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP64 ರೇಟಿಂಗ್ ಸೌಲಭ್ಯ ಹೊಂದಿರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile