ನಾಳೆ ಮತ್ತೆ Lava Virat V1 ಮೊಬೈಲ್‌ ಮಾರಾಟ ಪ್ರಾರಂಭ! ಕಡಿಮೆ ಬೆಲೆಗೆ ಲಭ್ಯ

HIGHLIGHTS

ನಾಳೆ ಲಾವಾ ವಿರಾಟ್‌ V1 ಮೊಬೈಲ್‌ ಸೇಲ್‌ ಪ್ರಾರಂಭ

ಲಾವಾ ವಿರಾಟ್‌ V1 ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಪಡೆದಿದೆ

ಲಾವಾ ವಿರಾಟ್‌ V1 ಈ ಮೊಬೈಲ್‌ ಎರಡು ಆಕರ್ಷಕ ಕಲರ್‌ ಆಯ್ಕೆಯಲ್ಲಿ ಲಭ್ಯ

ಲಾವಾ ಕಂಪನಿಯ ಇತ್ತೀಚಿನ Lava Virat V1 ಸ್ಮಾರ್ಟ್‌ಫೋನ್‌ ಅಗ್ಗದ ಬೆಲೆ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಆಗಷ್ಟ್‌ 19 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮತ್ತೆ ಸೇಲ್‌ ಪ್ರಾರಂಭ ಮಾಡಲಿದೆ. ಈ ನೂತನ ಸ್ಮಾರ್ಟ್‌ಫೋನ್‌ ಈ ಫೋನ್‌ ಯುನಿಸಾಕ್ SC9863A ಚಿಪ್‌ಸೆಟ್ ಪ್ರೊಸೆಸರ್‌ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 13MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್‌ ನೀಲಗಿರಿ ಬ್ಲೂ ಮತ್ತು ಹಿಮಾಲಯನ್ ಸಿಲ್ವರ್ ಶೆಡ್‌ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಲಾವಾ ವಿರಾಟ್‌ V1 ಮೊಬೈಲ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ ಅಗ್ಗದ ರೀಚಾರ್ಜ್‌ನಲ್ಲಿ ಪ್ರತಿದಿನ ಡೇಟಾ ಸೌಲಭ್ಯ ಜೊತೆಗೆ JioHotstar

ನಾಳೆ Lava Virat V1 ಸೇಲ್‌

ದೇಶೀಯ ಮಾರುಕಟ್ಟೆಯಲ್ಲಿ ಲಾವಾ ಕಂಪನಿಯ ಲಾವಾ ವಿರಾಟ್‌ V1 ಮೊಬೈಲ್‌ ನಾಳೆ (ಆಗಷ್ಟ್‌ 19 ರಿಂದ) ಮಧ್ಯಾಹ್ನ 12 ಗಂಟೆಗೆ ಮತ್ತೇ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಮೊಬೈಲ್‌ ಸಿಂಗಲ್‌ ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯವಿದ್ದು, 4GB RAM + 64GB ಸ್ಟೋರೇಜ್‌ ವೇರಿಯಂಟ್‌ 9,999 ರೂ.ಗಳ ಬೆಲೆಯನ್ನು ಹೊಂದಿದೆ. ಅಂದಹಾಗೆ ಈ ಮೊಬೈಲ್‌ ನೀಲಗಿರಿ ಬ್ಲೂ ಮತ್ತು ಹಿಮಾಲಯನ್ ಸಿಲ್ವರ್ ಶೆಡ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮತ್ತು ಲಾವಾ ವೆಬ್‌ಸೈಟ್‌ ಮೂಲಕ ಖರೀದಿಗೆ ಲಭ್ಯ.

Lava Virat V1

ಲಾವಾ ವಿರಾಟ್‌ V1 ಮೊಬೈಲ್‌ ಫೀಚರ್ಸ್‌

ಲಾವಾ ವಿರಾಟ್‌ V1 ಮೊಬೈಲ್‌ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಫೋನಿನ ಸ್ಕ್ರೀನ್‌ 720 x 1600 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಯುನಿಸಾಕ್ SC9863A ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 15 ಓಎಸ್‌ ಸಪೋರ್ಟ್‌ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಲಾವಾ ವಿರಾಟ್‌ V1 ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ ಅಗತ್ಯ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :